HomeKarnatakaಇತ್ತೀಚೆಗಷ್ಟೇ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಹೆಚ್. ನಾಗೇಶ್ ಗೆ 'ಕೈ' ಟಿಕೆಟ್

ಇತ್ತೀಚೆಗಷ್ಟೇ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಹೆಚ್. ನಾಗೇಶ್ ಗೆ ‘ಕೈ’ ಟಿಕೆಟ್

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಪಕ್ಷ ಇಂದು 124 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬಹುತೇಕ ಹಳೆ ಮುಖಗಳಿಗೆ ಮಣೆ ಹಾಕಲಾಗಿದೆ.

ಈ ಪೈಕಿ ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಹೆಚ್. ನಾಗೇಶ್ ಅವರಿಗೆ ಮಹದೇವಪುರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದ್ದು, ಮೊದಲ ಪಟ್ಟಿಯಲ್ಲಿಯೇ ಇವರಿಗೆ ಅವಕಾಶ ಸಿಕ್ಕಿದೆ.

ಇಂದು ಪ್ರಕಟವಾಗಿರುವ ಪಟ್ಟಿಯಲ್ಲಿ ಮಹದೇವಪುರ ಕ್ಷೇತ್ರದ ಅಭ್ಯರ್ಥಿ ಹೆಸರು ಟಿ. ನಾಗೇಶ್ ಎಂದು ನಮೂದಿಸಲಾಗಿದ್ದು, ಇದಕ್ಕೆ ಸ್ಪಷ್ಟನೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಅದು ಟಿ. ನಾಗೇಶ್ ಅಲ್ಲ ಎಚ್. ನಾಗೇಶ್ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular