ಇದೆಂಥ ಫಲಿತಾಂಶ…! ಯುಕೆಜಿ ವಿದ್ಯಾರ್ಥಿನಿಯನ್ನು ಫೇಲ್ ಮಾಡಿದ ಶಿಕ್ಷಣ ಸಂಸ್ಥೆ

ಬೆಂಗಳೂರಿನ ಶಿಕ್ಷಣ ಸಂಸ್ಥೆಯೊಂದು ಯುಕೆಜಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಫೇಲ್ ಮಾಡುವ ಮೂಲಕ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಆಕೆ ಬರೆದಿದ್ದ ನಾಲ್ಕು ವಿಷಯಗಳ ಪೈಕಿ ಒಂದು ವಿಷಯದಲ್ಲಿ ಫೇಲ್ ಎಂದು ನಮೂದಿಸಲಾಗಿದೆ.

ಆದರೆ, ರಾಜ್ಯದಲ್ಲಿ ಅನುತ್ತೀರ್ಣ ನೀತಿ ಜಾರಿಯಲ್ಲಿದ್ದು, ಎಂಟನೇ ತರಗತಿಯವರೆಗೆ ಯಾವುದೇ ವಿದ್ಯಾರ್ಥಿಯನ್ನು ಫೇಲ್ ಮಾಡುವಂತಿಲ್ಲ. ಜೊತೆಗೆ ಶಿಕ್ಷಣ ಹಕ್ಕು ಕಾಯ್ದೆ ಉಲ್ಲಂಘನೆಯೂ ಆಗುತ್ತದೆ.

ಇಷ್ಟಾದರೂ ಸಹ ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿರುವ ದೀಪ ಹಳ್ಳಿಯ ಸೇಂಟ್ ಜೋಸೆಫ್ ಚಾಮನೆಡ್ ಅಕಾಡೆಮಿ ಶಾಲೆಯಲ್ಲಿ ಇಂತಹದೊಂದು ತೀರ್ಮಾನ ಕೈಗೊಳ್ಳಲಾಗಿದೆ. ಇದು ಈಗ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಆ ವಯಸ್ಸಿನ ಪುಟ್ಟ ಮಗುವಿನ ಮೇಲೆ ಇದು ಎಂತಹ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ಶಾಲಾ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read