ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಆಸ್ತಿ ದಾಖಲೆಗಳು……ಹೊಸ ವ್ಯವಸ್ಥೆ ಜಾರಿ


ಬೆಂಗಳೂರು: ಬೆಂಗಳೂರಿನ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿ ದಾಖಲೆಗಳಿಗೆ ಸರ್ಕಾರಿ ಕಚೇರಿಗಳನ್ನು ಅಲೆಯುವ ಅಗತ್ಯ ಇರುವುದಿಲ್ಲ. ಸರ್ಕಾರವೇ ಅವರ ಮನೆ ಬಾಗಿಲಿಗೆ ಅವರ ಆಸ್ತಿ ದಾಖಲೆಗಳನ್ನು ತಲುಪಿಸುವ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಖಾತೆ ಎಂದು ಕರೆಯುವ ಬದಲು ಅದಕ್ಕೆ ಬೇರೆ ಹೆಸರು ಇಟ್ಟು, ಎಲ್ಲ ಆಸ್ತಿ ದಾಖಲೆಗಳನ್ನು ಒದಗಿಸಲಾಗುವುದು. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಹಳ್ಳಿಗಳಲ್ಲಿ ಮನೆ ಬಾಗಿಲಿಗೆ ಪಾಣಿಗಳನ್ನು ನೀಡುವ ‘ಭೂಮಿ’ ವ್ಯವಸ್ಥೆ ಮಾಡಲಾಗಿತ್ತು. ಇದೇ ಮಾದರಿಯಲ್ಲಿ ಬೆಂಗಳೂರು ನಗರದಲ್ಲಿ ಮನೆ ಬಾಗಿಲಲ್ಲೇ ಆಸ್ತಿ ದಾಖಲೆಗಳನ್ನು ನೀಡುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

ಅಲ್ಲದೇ ಮನೆ ಬಾಗಿಲಲ್ಲೇ ಆಯಾ ಆಸ್ತಿ ದಾಖಲೆಗಳನ್ನು ತಲುಪಿಸಿದರೆ, ಯಾರ ಬಳಿ ಎಷ್ಟು ಆಸ್ತಿ ಇದೆ ಎಂಬ ಸ್ಪಷ್ಟ ಚಿತ್ರಣವೂ ಸಿಗಲಿದೆ. ಯಾರೂ ಕೂಡ ಆಸ್ತಿ ತೆರಿಗೆ ಪಾವತಿಸದೇ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆಸ್ತಿ ತೆರಿಗೆ ವಿಚಾರದಲ್ಲಿ ಬೇಧ ಮಾಡುವುದಿಲ್ಲ. ಯಾರು ತೆರಿಗೆ ಪಾವತಿಸಿಲ್ಲ ಎಂದು ಮ್ಯಾಪಿಂಗ್ ಮಾಡಲಾಗುವುದು. ನಮ್ಮ ಸಂಪನ್ಮೂಲ ವೃದ್ಧಿಸಿಕೊಳ್ಳದಿದ್ದರೆ ಬೆಂಗಳೂರು ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ನಾವು ಕೈಗೆತ್ತಿಕೊಳ್ಳಲು ಮುಂದಾಗಿರುವ ಬೃಹತ್ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ ಮಾಡಿಕೊಳ್ಳಬೇಕು. ಹೀಗಾಗಿ ಎಲ್ಲರೂ ತೆರಿಗೆ ಪಾವತಿಸುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read