HomeKarnatakaಈಶ್ವರಪ್ಪ ನಿವಾಸದ ಮುಂದೆ ಅಭಿಮಾನಿಗಳ ದಂಡು; ಚುನಾವಣಾ ರಾಜಕೀಯ ನಿವೃತ್ತಿ ನಿರ್ಧಾರ ಹಿಂಪಡೆಯುವಂತೆ ದುಂಬಾಲು

ಈಶ್ವರಪ್ಪ ನಿವಾಸದ ಮುಂದೆ ಅಭಿಮಾನಿಗಳ ದಂಡು; ಚುನಾವಣಾ ರಾಜಕೀಯ ನಿವೃತ್ತಿ ನಿರ್ಧಾರ ಹಿಂಪಡೆಯುವಂತೆ ದುಂಬಾಲು

ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ದಿಢೀರ್ ಆಗಿ ಚುನಾವಣಾ ರಾಜಕಾರಣದಿಂದ ನಿವೃತ್ತಿಯನ್ನು ಘೋಷಿಸಿದ್ದು, ಈ ಕುರಿತಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

ಚುನಾವಣಾ ಕಣದಿಂದ ಹಿಂದೆ ಸರಿಯುವ ತೀರ್ಮಾನವನ್ನು ಈಶ್ವರಪ್ಪನವರು ಕೈಗೊಂಡಿದ್ದಾರೆ ಎಂಬ ಮಾಹಿತಿ ಮಾಧ್ಯಮಗಳ ಮೂಲಕ ತಿಳಿಯುತ್ತಿದ್ದಂತೆ ಶಿವಮೊಗ್ಗದ ಅವರ ನಿವಾಸದ ಮುಂದೆ ಅಭಿಮಾನಿಗಳು ಜಮಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಲವರು ಕಣ್ಣೀರಿಟ್ಟಿದ್ದು ಚುನಾವಣಾ ರಾಜಕೀಯ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯುವಂತೆ ದುಂಬಾಲು ಬಿದ್ದಿದ್ದಾರೆ. ಅಲ್ಲದೆ ಬೇಕೇ ಬೇಕು ನ್ಯಾಯ ಬೇಕು ಎಂಬ ಘೋಷಣೆಗಳನ್ನು ಕೂಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಈಶ್ವರಪ್ಪನವರ ಮೇಲೆ ಒತ್ತಡ ಹೇರುತ್ತಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular