ಚಿತ್ರದುರ್ಗ : ʼಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರʼ ಎಂದು ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.
ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಚಿತ್ರದುರ್ಗದ ಮುರುಘ ರಾಜೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ‘ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯಲಿದೆ. ಬಿಜೆಪಿ ಬೆಂಬಲಿಸುವುದಕ್ಕೆ ಬಂದಿರುವುದು ಬಹಳ ಸಂತೋಷವಾಗಿದೆ. ಕರ್ನಾಟಕದಲ್ಲಿ ಅಭಿವೃದ್ದಿಗೆ ಬ್ಲೂ ಪ್ರಿಂಟ್ ತಯಾರಿಸಿದ್ದೇನೆ, ಸಮಗ್ರ ಕರ್ನಾಟಕದ ಅಭಿವೃದ್ದಿಗೆ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇನೆ ಎಂದರು. ಯುವ ಸಮುದಾಯ, ಬಡ ಜನರ ಅಭಿವೃದ್ದಿಗೆ ಹೆಚ್ಚು ಒತ್ತು ನೀಡುತ್ತೇನೆ ಎಂದು ಮೋದಿ ಹೇಳಿದ್ದಾರೆ.
ಈ ಬಾರಿಯ ಚುನಾವಣೆಯ ಗುರಿ ಕರ್ನಾಟಕ ರಾಜ್ಯವನ್ನು ನಂಬರ್ 1 ಮಾಡುವ ಗುರಿಯಾಗಿದೆ. ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.