ನವದೆಹಲಿ: ಉಗ್ರರ ವಿರುದ್ಧ ಯಾವುದೇ ಕ್ರಮ ಕೈಗೊಂಡರು ಬೆಂಬಲವಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಹಲ್ಗಾಮ್ ನಲ್ಲಿ ಯಾರೇ ದಾಳಿ ಮಾಡಿದ್ದರೂ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ಉಗ್ರರ ವಿರುದ್ಧ ಕೇಂದ್ರ ಸರ್ಕಾರ ಏನೇ ಕ್ರಮ ಕೈಗೊಂಡರೂ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ವಿಪಕ್ಷಗಳ ಬೆಂಬಲವಿದೆ. ಉಗ್ರರ ವಿರುದ್ಧ ಪ್ರಧಾನಿ ಮೋದಿ ಕ್ರಮ ತೆಗೆದುಕೊಳ್ಳಬೇಕು. ಪಹಲ್ಗಾಮ್ ನಲ್ಲಿ ದಾಳಿ ಮಾಡಿದವರು ಯಾರೇ ಆಗಿರಲಿ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಉಗ್ರರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಳಂಬ ಮಾಡಬಾರದು. ಉಗ್ರರ ವಿರುದ್ಧ ಆದಷ್ಟು ಬೇಗನೆ ಸರ್ಕಾರ ಕ್ರಮ ಕೈಗೊಳ್ಳಲಿ. ಉಗ್ರರ ದಾಳಿಯಲ್ಲಿ ಮಡಿದವರಿಗೆ ಹುತಾತ್ಮ ಗೌರವ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.