ಉದ್ಯಮ ಆರಂಭಿಸಲು ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಭರ್ಜರಿ ಗುಡ್ ನ್ಯೂಸ್; ಇಲ್ಲಿದೆ ಡೀಟೇಲ್ಸ್

ವಾಣಿಜ್ಯ ಚಟುವಟಿಕೆ, ಉದ್ಯಮಗಳನ್ನು ಆರಂಭಿಸಲು ಇಚ್ಛಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಭರ್ಜರಿ ಗುಡ್ ನ್ಯೂಸ್ ಒಂದು ಇಲ್ಲಿದೆ. ಕೌಶಲಾಭಿವೃದ್ಧಿ ಇಲಾಖೆಯ ಸಿಡಾಕ್ ಸಂಸ್ಥೆಯ ಮೂಲಕ ಉದ್ಯಮಶೀಲತಾ ತರಬೇತಿಯನ್ನು ಆಯೋಜಿಸುತ್ತಿದ್ದು, ಇದಕ್ಕೆ ಅರ್ಜಿ ಸಲ್ಲಿಸಲು ನವೆಂಬರ್ 30 ಅಂತಿಮ ದಿನಾಂಕವಾಗಿದೆ.

ತರಬೇತಿ ಪಡೆಯಲು ಬಯಸುವವರಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 50 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು, ಪಿಯುಸಿ ಮತ್ತು ಮೇಲ್ಪಟ್ಟ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ತರಬೇತಿಗೆ ಆಯ್ಕೆಯಾದವರಿಗೆ ಉದ್ದಿಮೆ, ವಾಣಿಜ್ಯ ಚಟುವಟಿಕೆಗಳನ್ನು ಪ್ರಾರಂಭಿಸಲು ಉತ್ತೇಜನ ಮತ್ತು ಮಾರ್ಗದರ್ಶನ ನೀಡಲು ಉದ್ಯಮಶೀಲತಾ ತರಬೇತಿಯನ್ನು ಆಯೋಜಿಸಲಾಗುತ್ತದೆ.

ಸರ್ಕಾರದ ವಿವಿಧ ಇಲಾಖೆಗಳಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಉದ್ದಿಮೆಗಳನ್ನು ಸ್ಥಾಪಿಸಲು ನೀಡಲಾಗುವ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ.

ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಇತರೆ ಬ್ಯಾಂಕ್ ಗಳು ಸೇರಿದಂತೆ ವಿವಿಧ ಹಣಕಾಸು ಸಂಸ್ಥೆಗಳಿಂದ ನೀಡಲಾಗುವ ಸಾಲ ಸೌಲಭ್ಯದ ಮಾಹಿತಿಯನ್ನು ನೀಡಲಾಗುತ್ತದೆ.

ಆಯಾ ಜಿಲ್ಲಾ ಕೇಂದ್ರಗಳಲ್ಲಿ ಹತ್ತು ದಿನಗಳ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.

ತರಬೇತಿಗೆ ಹಾಜರಾಗಲು ಪ್ರತಿ ಅಭ್ಯರ್ಥಿಗೆ ಪ್ರಯಾಣ ಭತ್ಯೆಯಾಗಿ ಹತ್ತು ದಿನಗಳಿಗೆ ಒಂದು ಸಾವಿರ ರೂಪಾಯಿಗಳ ಕ್ರೋಡಿಕೃತ ಮೊತ್ತವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು www.scsptsp.karnataka.gov.in ಗೆ ಭೇಟಿ ನೀಡಬಹುದಾಗಿದ್ದು ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಮಿತ್ರ ಸಹಾಯವಾಣಿ ಸಂಖ್ಯೆ 9482300400 ಸಂಪರ್ಕಿಸಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read