
ಮಂಗಳವಾರದಂದು ವಿಧಾನಸೌಧದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವ ಸಮಾಲೋಚನಾ ಸಭೆ ನಡೆಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಇಲಾಖೆಯನ್ನು ಆಧುನೀಕರಣಗೊಳಿಸುವ ಹಾಗೂ ಹೊಸ ಕಾಯಕಲ್ಪ ನೀಡುವ ಕುರಿತಂತೆ ಚರ್ಚೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಸಿಎಆರ್ ಹಾಗೂ ಡಿಎಆರ್ ಗಳಲ್ಲಿ ಮಹಿಳೆಯರ ನೇಮಕ ಕುರಿತಂತೆ ಪ್ರಸ್ತಾವನೆಯನ್ನು ಅಂತಿಮಗೊಳಿಸಲಾಗಿದ್ದು, ಇದರ ಜೊತೆಗೆ ಪೊಲೀಸ್ ವಸತಿ ಯೋಜನೆಗಳನ್ನು ತ್ವರಿತಗೊಳಿಸುವ ಕುರಿತಂತೆ ಹೆಚ್ಚಿನ ಅನುದಾನ ಕೋರುವ ಪ್ರಸ್ತಾವನೆಯನ್ನು ಸಹ ಸಿದ್ಧಪಡಿಸಲಾಗಿದೆ.

