ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್: ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ SSC ಪರೀಕ್ಷೆ

ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗ ಕಳೆದ ಹತ್ತು ದಿನಗಳ ಹಿಂದೆ ಹೊರಡಿಸಲಾದ ಅಧಿಸೂಚನೆ ಪ್ರಕಾರ ಮಲ್ಟಿ ಟಾಸ್ಕಿಂಗ್ ಸ್ಟಾಫ್ ನಾನ್ ಟೆಕ್ನಿಕಲ್, ಹವಾಲ್ದಾರ್ ಹುದ್ದೆಯ ಪರೀಕ್ಷೆಯನ್ನು ಕನ್ನಡ‌ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲೂ ಬರೆಯಲು ಅವಕಾಶ ನೀಡಲಾಗಿದೆ.

ಪರೀಕ್ಷೆಗೆ ದಿನಾಂಕ 30-6-2023ರಂದು ಅಧಿಸೂಚನೆ ಹೊರಡಿಸಲಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಪರೀಕ್ಷೆ ನಡೆಯಲಿದೆ. ಅರ್ಜಿ ಸ್ವೀಕರಿಸುವ ಅಂತಿಮ ದಿನಾಂಕ 21-07-2023 (23:00 ಗಂಟೆಯವರೆಗೆ) ಪರೀಕ್ಷೆಗೆ ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ.

ಮಲ್ಟಿ ಟಾಸ್ಕಿಂಗ್ ಸ್ಟಾಫ್ ನಾನ್ ಟೆಕ್ನಿಕಲ್ ಒಟ್ಟು ಹುದ್ದೆಗಳು -1198

ಹವಾಲ್ದಾರ್ ಒಟ್ಟು ಹುದ್ದೆಗಳು – 360

ಪರೀಕ್ಷೆ ನಡೆಯುವ ಸ್ಥಳಗಳು: ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ.

ಹೆಚ್ಚಿನ ವಿವರಗಳಿಗೆ ವೆಬ್‌ ಸೈಟ್ www.ssckkr.kar.nic.in ಅಥವಾ https://ssc.nic.in ಸಂಪರ್ಕಿಸಬಹುದು

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read