ಬಳ್ಳಾರಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಮತ್ತು ಎನ್.ಪಿ.ಪಿ.ಸಿ ಕಾರ್ಯಕ್ರಮದಡಿ ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಲು ವಿವಿಧ ಹುದ್ದೆಗಳಿಗೆ ಗುತ್ತಿಗೆ ಅಧಾರದ ಮೇಲೆ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ (direct interview) ಅಹ್ವಾನಿಸಲಾಗಿದೆ.
ಹುದ್ದೆಗಳ ವಿವರ : ಜಿಲ್ಲಾ ಹೆಲ್ತ್ ಅಂಡ್ ವೆಲ್ನೆಸ್ ಸೆಂಟರ್ ಕೋ-ಆರ್ಡಿನೇಟರ್ 01 ಹುದ್ದೆ, ಜಿಲ್ಲಾ ಸಲಹೆಗಾರರು-01 ಹುದ್ದೆ, ಫಿಜಿಷಿಯನ್-02, ಶೂಶ್ರೂಷಕರು-02 ಮತ್ತು ಶೂಶ್ರೂಷಕರು 01 ಹುದ್ದೆ ಸೇರಿ ಒಟ್ಟು 07 ಇದ್ದು, ಹುದ್ದೆಗಳಿಗನುಗುಣವಾಗಿ ಅನುಭವ ಹೊಂದಿರಬೇಕು.
ಈ ಹುದ್ದೆಯು ಒಂದು ವರ್ಷ ಅವಧಿಗೆ ಅಥವಾ ಈ ಕಚೇರಿಯ ಮುಂದಿನ ಆದೇಶದವರೆಗೆ ಸೀಮಿತವಿರುತ್ತವೆ. ಹಾಗೂ ಸದರಿ ಹುದ್ದೆಯು ಯಾವುದೇ ಕಾರಣಕ್ಕೂ ಸರ್ಕಾರಿ ಸೇವೆಯಲ್ಲಿ ಸಕ್ರಮಗೊಳಿಸಲಾಗುವುದಿಲ್ಲ ಮತ್ತು ಅಭ್ಯರ್ಥಿಗಳ ಆಯ್ಕೆಯು (Selection of candidates) ಮೀಸಲಾತಿ ಹಾಗೂ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಹುದ್ದೆಯ ಕುರಿತು ತಮ್ಮ ಬಯೋಡಾಟಾದಲ್ಲಿ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ಲಗತ್ತಿಸಿ ಅಗತ್ಯ ವಿದ್ಯಾರ್ಹತೆ, ಅನುಭವ, ಜಾತಿ ಪ್ರಮಾಣ ಪತ್ರ, ಮತ್ತು ಇತರೆ ದೃಢಿಕೃತ ನಕಲು ದಾಖಲಾತಿಗಳ ಪ್ರತಿಗಳ ಒಂದು ಸೆಟ್ ಹಾಗೂ ತಾವು ಸಲ್ಲಿಸುವ ದಾಖಲಾತಿಗಳ ಮೂಲ ದಾಖಲಾತಿಗಳನ್ನು ಸಲ್ಲಿಸಬೇಕು.
ನೇರ ಸಂದರ್ಶನವು ಜೂನ್ 12 ರಂದು ಬೆಳಗ್ಗೆ 10.30 ರಿಂದ ಸಂಜೆ 05 ರವರೆಗೆ ನಗರದ ಅನಂತಪುರ ರಸ್ತೆಯ ಜಿಲ್ಲಾ ಆಸ್ಪತ್ರೆ ಆವರಣದ ಜಿಲ್ಲಾ ಸರ್ವೇಕ್ಷಣಾ ಘಟಕದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ದೂ.08392-274031 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಂಬಿ ವಿ.ಕೆ ಅವರು ತಿಳಿಸಿದ್ದಾರೆ.