ಉದ್ಯೋಗಾಕಾಂಕ್ಷಿಗಳಿಗೆ ಬಂಪರ್; ಇಲ್ಲಿದೆ ಡೀಟೇಲ್ಸ್

ಮೂಡಬಿದರೆಯಲ್ಲಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಜೂನ್ 7 ಮತ್ತು 8 ರಂದು ಬೃಹತ್ ಉದ್ಯೋಗ ಮೇಳವನ್ನು ಶಿಕ್ಷಣ ಸಂಸ್ಥೆ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು.

ಅವರು ಇಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗಿರುವ ಉದ್ಯೋಗಮೇಳ 14ನೇ ಮೇಳವಾಗಿದೆ. ಬ್ಯಾಂಕಿಂಗ್, ಹಣಕಾಸು, ಐಟಿ, ಐಟಿಸಿ, ಮ್ಯಾನುಫ್ಯಾಕ್ಷರಿಂಗ್, ಹೆಲ್ತ್ ಕೇರ್, ಫಾರ್ಮಾ, ಆಟೊಮೊಬೈಲ್ಸ್, ಹಾಸ್ಪಿಟಲಿಟಿ ಸೇರಿದಂತೆ ಪ್ರತಿನಿಧಿಸುವ ಉನ್ನತ ಕಂಪನಿಗಳು ಆಳ್ವಾಸ್ ಪ್ರಗತಿಯಲ್ಲಿ ನೇಮಕಾತಿ ನಡೆಸಲಿವೆ ಎಂದರು.

ಈ ಕಂಪನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ, ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್, ಕಲಾ, ವಾಣಿಜ್ಯ, ಮ್ಯಾನೇಜ್ ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ, ಎಸ್ಎಸ್ಎಲ್ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದರು.

200ಕ್ಕೂ ಅಧಿಕ ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಹೈದರಾಬಾದ್ ನ ಫ್ಯಾಕ್ಟ್ ಸೆಟ್, ಇಎಕ್ಸ್ಎಲ್ ಸರ್ವಿಸ್, ಮಹೀಂದ್ರಾ ಫಿನಾನ್ಸ್, ಪ್ರತಿಷ್ಠಿತ ಬ್ಯಾಂಕ್ ಗಳಾದ ಹೆಚ್.ಡಿ.ಎಫ್.ಸಿ., ಆಕ್ಸಿಸ್, ಐ.ಡಿ.ಎಫ್.ಸಿ., ಫಸ್ಟ್ ಬ್ಯಾಂಕ್, ಬಂಧನ್ ಬ್ಯಾಂಕ್, ಫ್ಲಿಪ್ ಕಾರ್ಟ್, ಇವೈ ಕಂಪನಿ ಮುಂತಾದ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ ಎಂದರು.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಕಂಪನಿಗಳ ಹಾಗೂ ನವೀಕೃತ ಮಾಹಿತಿಗಳನ್ನು ಅಧಿಕೃತ ವೆಬ್ ಸೈಟ್ www.alvaspragati.com ನಲ್ಲಿ ಪಡೆಯಬಹುದಾಗಿದೆ. ಅಭ್ಯರ್ಥಿಗಳು ಈ ವೆಬ್ ಸೈಟ್ ನಲ್ಲಿ ಕಡ್ಡಾಯವಾಗಿ ಉಚಿತ ಆನ್ ಲೈನ್ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. 90089 07716, 96631 90590 ಸಂಪರ್ಕಿಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read