ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಕಾರ್ಖಾನೆ, ರಾಜೀವ್ ಗಾಂಧಿ ಆರೋಗ್ಯ ವಿವಿ ಹೀಗೆ 8 ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅ.9ರಿಂದ ನ.11ರವರೆಗೆ ಅರ್ಜಿ ಸಲ್ಲಿಸಬಹುದು. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕ ಮಾಡಲಾಗುತ್ತದೆ. OMR ಆಧಾರಿತ ಪರೀಕ್ಷೆ. ಋಣಾತ್ಮಕ ಮೌಲ್ಯಮಾಪನ ಇದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದರಷ್ಟು (1/4) ಅಂಕ ಕಡಿತ ಮಾಡಲಾಗುತ್ತದೆ. ಒಂದೇ ಪಠ್ಯಕ್ರಮ ಇರುವ ವಿವಿಧ ಇಲಾಖೆಗಳ ಹುದ್ದೆಗಳಿಗೆ ಒಂದೇ ಪರೀಕ್ಷೆ ನಡೆಸಿ ಸಂಬಂಧಪಟ್ಟ ಇಲಾಖೆಗಳಿಗೆ ಮೆರಿಟ್ ಪಟ್ಟಿ ನೀಡಲಾಗುವುದು. ಪರೀಕ್ಷಾ ದಿನಾಂಕವನ್ನು ನಂತರದ ದಿನಗಳಲ್ಲಿ ತಿಳಿಸಲಾಗುವುದು. ಆಸಕ್ತರು ಈಗಿನಿಂದಲೇ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವುದು ಉತ್ತಮ. ಹೆಚ್ಚಿನ ವಿವರಗಳಿಗೆ http://cetonline.Karnataka.gov.in/kea/ ಭೇಟಿ ನೀಡಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.
ಈ ಕೆಳಕಂಡ ಸರ್ಕಾರಿ ಇಲಾಖೆ / ನಿಗಮ / ಸಂಸ್ಥೆಗಳಲ್ಲಿ ಉಳಿಕೆ ಮೂಲ ವೃಂದದಲ್ಲಿರುವ ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳ ನೇಮಕಾತಿಗೆ ಆರ್ಹತೆ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಬೇಕು.
- ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ
- ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್
- ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ
- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ
- ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
- ಕೃಷಿ ಮಾರಾಟ ಇಲಾಖೆ
- | ತಾಂತ್ರಿಕ ಶಿಕ್ಷಣ ಇಲಾಖೆ
- ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)
- ಆನ್ಲೈನ್ ಅರ್ಜಿ ಸಲ್ಲಿಸಲು ದಿನಾಂಕ 09-10-2025 ರಿಂದ 01-11-2025 ರ ವರೆಗೆ ಅವಕಾಶ ನೀಡಲಾಗಿದೆ.
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಬಗ್ಗೆ ಸೂಚನೆಗಳು, ಅಗತ್ಯ ಅರ್ಹತೆ ವಿವರ, ವಯೋಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ, ಸ್ಪರ್ಧಾತ್ಮಕ ಪರೀಕ್ಷೆಯ ವಿಷಯಗಳು, ಪ್ರವರ್ಗವಾರು ಮತ್ತು ಹುದ್ದೆವಾರು ಹುದ್ದೆಯ ವಿವರಗಳು ಮತ್ತು ನೇಮಕಾತಿ ಪ್ರಕ್ರಿಯೆಯ ವಿವರವಾದ ಸೂಚನೆಗಳಿಗಾಗಿ https://cetonline.karnataka.gov.in/kea/ಪ್ರಾಧಿಕಾರದ ವೆಬ್ಸೈಟ್ ವೀಕ್ಷಿಸಬಹುದಾಗಿದೆ.
ಅರ್ಜಿ ಆಹ್ವಾನಿಸಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸಂಬಂಧ ಪಟ್ಟ ನೇಮಕಾತಿ ಪ್ರಾಧಿಕಾರಗಳಿಗೆ ನೀಡುವ ಜವಾಬ್ದಾರಿ ಮಾತ್ರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ್ದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ನೀಡಿರುವ ಮಾಹಿತಿಯನುಸಾರ ದಾಖಲೆ ಪರಿಶೀಲಿಸಿ ನಿಯಮಾನುಸಾರ ನೇಮಕಾತಿ ಆದೇಶ ನೀಡುವುದು ಸಂಬಂಧ ಪಟ್ಟ ನೇಮಕಾತಿ ಪ್ರಾಧಿಕಾರದ ಜವಾಬ್ದಾರಿಯಾಗಿರುತ್ತದೆ.
ನೇಮಕಾತಿ ಪ್ರಕ್ರಿಯೆ ಕುರಿತು ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿಯನ್ನು ಕಳುಹಿಸುವುದಿಲ್ಲ, ಅಭ್ಯರ್ಥಿಗಳು ಆಗಿಂದಾಗ್ಗೆ ಪ್ರಾಧಿಕಾರದ ವೆಬ್ ಸೈಟ್ https://cetonline.karnataka.gov.in/kea/ಗೆ ಭೇಟಿ ನೀಡುತ್ತಿರಲು ಸೂಚಿಸಿದೆ.
#KEARecruitment: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಕಾರ್ಖಾನೆ, ರಾಜೀವ್ ಗಾಂಧಿ ಆರೋಗ್ಯ ವಿವಿ ಹೀಗೆ 8 ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) October 8, 2025
ಅ.9ರಿಂದ ನ.11ರವರೆಗೆ ಅರ್ಜಿ ಸಲ್ಲಿಸಬಹುದು. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ… pic.twitter.com/xsrF20dAAc