HomeKarnatakaಎದೆ ಝಲ್ ಎನಿಸುವ ಭೀಕರ ದೃಶ್ಯ.... ನೋಡ ನೋಡುತ್ತಿದ್ದಂತೆಯೇ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋದ ಮಹಿಳೆ

ಎದೆ ಝಲ್ ಎನಿಸುವ ಭೀಕರ ದೃಶ್ಯ…. ನೋಡ ನೋಡುತ್ತಿದ್ದಂತೆಯೇ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋದ ಮಹಿಳೆ

ಹೈದರಾಬಾದ್: ದೇಶದ ಹಲವು ರಾಜ್ಯಗಳಲ್ಲಿ ಮಳೆ ಅಬ್ಬರಕ್ಕೆ ನದಿಗಳು ಅಪಾಯದ ಮಟ್ಟದಲ್ಲಿ ಬೋರ್ಗರೆದು ಹರಿಯುತ್ತಿವೆ. ಸಾಲು ಸಾಲು ದುರಂತಗಳು ಕಣ್ಮುಂದೆಯೇ ಸಂಭವಿಸುತ್ತಿವೆ. ನೋಡ ನೋಡುತ್ತಿದ್ದಂತೆಯೇ ಪ್ರವಾಹದ ನೀರಿನಲ್ಲಿ ಮಹಿಳೆಯೊಬ್ಬರು ಕೊಚ್ಚಿ ಹೋಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಗದ್ದೆಯಲ್ಲಿ ನಾಟಿ ಕೆಲಸ ಮುಗಿಸಿ ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕುಮ್ಮಾರಿವಾಗು-ಚಪ್ಪರಪಲ್ಲಿ ಮಾರ್ಗದಲ್ಲಿ ನದಿಯ ಪ್ರವಾಹಕ್ಕೆ ರಸ್ತೆಗಳು ಜಲಾವೃತಗೊಂಡಿದ್ದು, ಪ್ರವಾಹದ ರೀತಿಯಲ್ಲಿ ರಸ್ತೆಯಲ್ಲಿ ನೀರು ಹರಿಯುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಟಿ ಕೆಲಸ ಮುಗಿಸಿ ಮಹಿಳೆಯರು ಇದೇ ಮಾರ್ಗದಲ್ಲಿ ಬರುತ್ತಿದ್ದಾಗ ಪ್ರವಾಹದ ರಭಸಕ್ಕೆ ಮಹಿಳೆಯರು ಕೈ ಕೈ ಹಿಡುದುಕೊಂಡು ರಸ್ತೆ ದಾಟಲು ಮುಂದಾಗಿದ್ದಾರೆ. ಈ ವೇಳೆ ಓರ್ವ ಮಹಿಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ.

ಸವಿತಾ ನೀರಿನಲ್ಲಿ ಕೊಚ್ಚಿ ಹೋದ ಮಹಿಳೆ. ಎದೆ ಝಲ್ ಎನಿಸುವ ಭೀಕರ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular