HomeKarnatakaಏರ್ ಕಂಪ್ರೆಸರ್ ಸ್ಪೋಟ; ಟೈರ್ ಅಂಗಡಿ ಕಾರ್ಮಿಕ ಸಾವು

ಏರ್ ಕಂಪ್ರೆಸರ್ ಸ್ಪೋಟ; ಟೈರ್ ಅಂಗಡಿ ಕಾರ್ಮಿಕ ಸಾವು

ಏರ್ ಕಂಪ್ರೆಸರ್ ಸ್ಪೋಟಗೊಂಡ ಪರಿಣಾಮ ಟೈಯರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ನಲ್ಲಿ ನಡೆದಿದೆ.

ಅಲಂಕಾರು ಗ್ರಾಮದ ನಿವಾಸಿ 43 ವರ್ಷದ ರಾಜೇಶ್ ಪೂಜಾರಿ ಮೃತ ಕಾರ್ಮಿಕನಾಗಿದ್ದು, ಟೈಯರ್ ರಿಸೋಲ್ ಮಾಡುತ್ತಿದ್ದ ವೇಳೆ ಏಕಾಏಕಿ ಏರ್ ಕಂಪ್ರೆಸರ್ ಸ್ಪೋಟಗೊಂಡಿತ್ತು.

ಇದರಿಂದಾಗಿ ರಾಜೇಶ್ ಪೂಜಾರಿ ತೀವ್ರವಾಗಿ ಗಾಯಗೊಂಡಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular