ಒಂದು ವರ್ಷದಿಂದಲೇ ಚುನಾವಣೆ ತಯಾರಿ; 36 ಬಾರಿ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ; ಗೆಲುವಿನ ವಿಶ್ವಾಸದಲ್ಲಿ ಬಿಜೆಪಿ

ಬಿಜೆಪಿ ಕಳೆದ ಒಂದು ವರ್ಷದಿಂದಲೇ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿತ್ತು ಎಂದು ಹೇಳಿರುವ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಚುನಾವಣೆ ಘೋಷಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು 16 ಬಾರಿ, ಚುನಾವಣೆ ಘೋಷಣೆಯಾದ ಬಳಿಕ 20 ಬಾರಿ ರಾಜ್ಯ ಪ್ರವಾಸ ಮಾಡಿದ್ದು, ಹೀಗಾಗಿ ಜನ ನಮಗೆ ಬಹುಮತ ನೀಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಗಳು ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ರಾಜ್ಯದ ಜನತೆಗೆ ಮೆಚ್ಚುಗೆ ಇದೆ. ಇದೆಲ್ಲವನ್ನು ಪರಿಗಣಿಸಿ ನಮಗೆ ಆಶೀರ್ವಾದ ಮಾಡಲಿದ್ದು, ಹೀಗಾಗಿ ಈ ಬಾರಿ ಬಿಜೆಪಿಯ ಬಹುಮತದ ಸರ್ಕಾರ ಬರುವುದು ಖಚಿತ ಎಂದು ತಿಳಿಸಿದರು.

ವರುಣಾದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರಾಭವಗೊಳ್ಳುವುದು ಖಚಿತ ಎಂದು ಹೇಳಿದ ನಳಿನ್ ಕುಮಾರ್ ಕಟೀಲ್, ಇದರ ಮಧ್ಯೆಯೂ ಇವರಿಬ್ಬರ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಒಳ ಜಗಳ ನಡೆಯುತ್ತಿದೆ ಎಂದು ವ್ಯಂಗ್ಯವಾಡಿದರು. ಅಲ್ಲದೆ ನನಗೆ ರಾಜ್ಯ ರಾಜಕಾರಣಕ್ಕೆ ಬರುವ ಇಚ್ಛೆ ಇಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read