ಒಡಿಶಾದ ರೈಲು ದುರಂತದಲ್ಲಿ (railway accident) 207 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ದುರಂತಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ.
ಇದೀಗ ಘಟನೆ ಕುರಿತು ನಟ ರಾಕಿಂಗ್ ಸ್ಟಾರ್ ಯಶ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಒಡಿಶಾದ ರೈಲು ದುರಂತ ಎಷ್ಟು ಹೃದಯ ವಿದ್ರಾವಕವಾಗಿದೆ ಎಂಬುದನ್ನು ಪದಗಳಲ್ಲಿ ವಿವರಿಸುವುದು ಕಷ್ಟ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸಿದ ಜನರಿಗೆ ಕೃತಜ್ಞತೆಗಳು ಎಂದು ನಟ ಯಶ್ ಟ್ವೀಟ್ ಮಾಡಿದ್ದಾರೆ.
.
ಒಡಿಶಾದ ಬಾಲಸೋರ್ ಪ್ರದೇಶದಲ್ಲಿ ನಿನ್ನೆ ಭೀಕರ ರೈಲು ಅಪಘಾತ (railway accident) ನಡೆದಿದ್ದು, ಗೂಡ್ಸ್ ರೈಲಿಗೆ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
It’s difficult to describe in words how heart-wrenching the train tragedy of Odisha is. My deepest condolences to the families of the deceased and praying for the speedy recovery of those injured. Gratitude to the people who have come out in large numbers to help with rescue…
— Yash (@TheNameIsYash) June 3, 2023