HomeKarnatakaಕಡಪಾಗೆ ಹೋಗಿ ಬಂದ ಮೇಲೆ ಮಾತಾಡ್ತೇನೆ; ವಕೀಲ ದೇವರಾಜೇಗೌಡ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ

ಕಡಪಾಗೆ ಹೋಗಿ ಬಂದ ಮೇಲೆ ಮಾತಾಡ್ತೇನೆ; ವಕೀಲ ದೇವರಾಜೇಗೌಡ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ

ಪೆನ್ ಡ್ರೈವ್ ಇಟ್ಟುಕೊಂಡು ತಮಗೆ ಬ್ಲಾಕ್ ಮೇಲ್ ಮಾಡಲಾಗಿದೆ ಎಂದು ಮಹಿಳೆಯೊಬ್ಬರು ಆರೋಪಿಸಿರುವ ಹಿನ್ನೆಲೆಯಲ್ಲಿ ವಕೀಲ ದೇವರಾಜೇಗೌಡರನ್ನು ಬಂಧಿಸಲಾಗಿದೆ.

ಇದರ ಮಧ್ಯೆ ಮಾತನಾಡಿದ್ದ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ವಿಡಿಯೋ ಬಹಿರಂಗ ಹಿನ್ನೆಲೆಯಲ್ಲಿ ದೊಡ್ಡವರಿದ್ದಾರೆ ಎಂಬ ಹೇಳಿಕೆ ನೀಡಿದ್ದರು.

ಅವರ ಈ ಹೇಳಿಕೆ ಕುರಿತಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಾನು ಕಡಪಾಗೆ ಹೋಗುತ್ತಿದ್ದೇನೆ. ಅಲ್ಲಿಂದ ಬಂದ ಮೇಲೆ ಏನೆಂದು ಪರಿಶೀಲಿಸಿ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಡಿಕೆಶಿ ಕಡಪಾಗೆ ತೆರಳಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular