ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಕೋಟೆ ನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದು, ಜಯದೇವ ಮುರುಘ ರಾಜೇಂದ್ರ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯುತ್ತಿದೆ.

ಕನ್ನಡದಲ್ಲಿಯೇ ತಮ್ಮ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿಯವರು, ಮದಕರಿ ನಾಯಕ, ಒನಕೆ ಓಬವ್ವ ಅವರಿಗೆ ನನ್ನ ನಮಸ್ಕಾರಗಳು. ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂದು ಹೇಳಿದ್ದಾರೆ.

ಕರ್ನಾಟಕವನ್ನು ದೇಶದ ನಂಬರ್ ಒನ್ ರಾಜ್ಯವನ್ನಾಗಿ ಮಾಡಲು ಡಬಲ್ ಇಂಜಿನ್ ಸರ್ಕಾರ ಬೇಕಾಗಿದೆ. ಹೀಗಾಗಿ ಬಿಜೆಪಿಯನ್ನು ಆಶೀರ್ವದಿಸಲು ಅತಿ ದೊಡ್ಡ ಪ್ರಮಾಣದಲ್ಲಿ ನೀವೆಲ್ಲ ಬಂದಿದ್ದೀರಿ. ನಿಮಗೆ ನನ್ನ ಪ್ರಣಾಮಗಳು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read