
ಇತ್ತೀಚೆಗಷ್ಟೇ ಹೃದಯ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ತಿರುಮಲೇಶ್, ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಕಾರಡ್ಕ ಎಂಬ ಗ್ರಾಮದಲ್ಲಿ 1940ರ ಸೆಪ್ಟೆಂಬರ್ 12ರಂದು ಜನಿಸಿದ ತಿರುಮಲೇಶ್, ಹೈದರಾಬಾದಿನ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಅಂಡ್ ಫಾರಿನ್ ಲಾಂಗ್ವೇಜಸ್ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಸೇರಿ ಅಲ್ಲಿಯೇ ನಿವೃತ್ತರಾಗಿದ್ದರು.

