HomeAgricultureಕರಾವಳಿ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ; ಮೀನುಗಾರರಿಗೆ ಮಹತ್ವದ ಸೂಚನೆ

ಕರಾವಳಿ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ; ಮೀನುಗಾರರಿಗೆ ಮಹತ್ವದ ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಇದು ಮುಂದುವರೆಯುವ ಸಾಧ್ಯತೆ ಇದೆ.

ಅಲ್ಲದೆ ಕರಾವಳಿ ವ್ಯಾಪ್ತಿಯಲ್ಲಿ ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುತ್ತಿದ್ದು, ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನುಳಿದಂತೆ ಕಲ್ಯಾಣ ಕರ್ನಾಟಕದ ಯಾದಗಿರಿ, ಕಲಬುರಗಿ, ಬೀದರ್, ಕೊಪ್ಪಳ, ರಾಯಚೂರು, ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶನಿವಾರ ಮಳೆಯಾಗಿದ್ದು ಇಂದು ಸಹ ಮುಂದುವರಿಯಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular