 ಮಣಿಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಸ್ಸಾಂ ರೈಫಲ್ಸ್ ನ ಕರ್ನಾಟಕ ಮೂಲದ ಯೋಧರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮಣಿಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಸ್ಸಾಂ ರೈಫಲ್ಸ್ ನ ಕರ್ನಾಟಕ ಮೂಲದ ಯೋಧರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ನಿವಾಸಿ 27 ವರ್ಷದ ಸಂದೀಪ್ ಮೃತಪಟ್ಟವರಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯೆ ವಿನೋದಮ್ಮ ಹಾಗೂ ಹಿರಿಯಣ್ಣ ದಂಪತಿಯ ಪುತ್ರರಾಗಿದ್ದಾರೆ.
ಇವರು ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ಸೇನೆಯ ಮೂಲಗಳು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಸಾವಿಗೆ ನಿಖರ ಕಾರಣ ಏನೆಂಬುದು ತಿಳಿದು ಬಂದಿಲ್ಲ. ರಜೆ ಕಾರಣಕ್ಕೆ ಇತ್ತೀಚೆಗೆ ಊರಿಗೆ ಬಂದಿದ್ದ ಸಂದೀಪ್ ಫೆಬ್ರವರಿ 19ರಂದು ಕರ್ತವ್ಯಕ್ಕೆ ಹಾಜರಾಗಿದ್ದರು.

		 Loading ...
 Loading ... 