HomeKarnatakaಕರ್ನಾಟಕ ಸಿಎಂ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಬಿಜೆಪಿಯೇತರ ಘಟಾನುಘಟಿ ನಾಯಕರು; ಇಲ್ಲಿದೆ ಸಂಪೂರ್ಣ ಪಟ್ಟಿ

ಕರ್ನಾಟಕ ಸಿಎಂ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಬಿಜೆಪಿಯೇತರ ಘಟಾನುಘಟಿ ನಾಯಕರು; ಇಲ್ಲಿದೆ ಸಂಪೂರ್ಣ ಪಟ್ಟಿ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುವ ಸಮಾರಂಭಕ್ಕೆ ಘಟಾನುಘಟಿ ರಾಜಕೀಯ ನಾಯಕರು ಬರಲಿದ್ದಾರೆ.

ನೂತನ ಸರ್ಕಾರದ ಪದಗ್ರಹಣ ಸಮಾರಂಭ ಶನಿವಾರ ನಡೆಯಲಿದ್ದು ಈಗಾಗಲೇ ಸಿದ್ಧತೆಗಳು ಆರಂಭವಾಗಿವೆ. ರಾಜ್ಯ ಕಾಂಗ್ರೆಸ್ ಪ್ರಮಾಣವಚನ ಸಮಾರಂಭಕ್ಕೆ ಬಿಜೆಪಿಯೇತರ ಮುಖ್ಯಸ್ಥರಿಗೆ ಆಹ್ವಾನ ಕಳುಹಿಸಿದೆ. ದೇಶದಾದ್ಯಂತ ಸಮಾನ ಮನಸ್ಕ ರಾಜಕೀಯ ಪಕ್ಷಗಳ ಮಂತ್ರಿಗಳು ಮತ್ತು ಇತರ ನಾಯಕರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಕಾಂಗ್ರೆಸ್‌ನ ಪ್ರಮುಖ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ
ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಶನಿವಾರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇವರೊಂದಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಿಯೋಜಿತ ಸಿಎಂ ಸಿದ್ದರಾಮಯ್ಯ ದೂರವಾಣಿ ಕರೆ ಮಾಡಿ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ್ದಾರೆ.

ಇವರೊಂದಿಗೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರಿಗೂ ಆಹ್ವಾನ ನೀಡಲಾಗಿದೆ.

ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಮೇ 20 ರಂದು ಮಧ್ಯಾಹ್ನ 12:30 ಕ್ಕೆ ಇತರ 20 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular