HomeCrimeಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ

ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ

ವಿಜಯಪುರ: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ.

ಮಲ್ಲಿಕಾರ್ಜುನ ದೊಡಮನಿ (43) ಕೊಲೆಯಾದ ವ್ಯಕ್ತಿ. ವಿಜಯಪುರದ ಬಾಡರ ಓಣಿಯ ನಿವಾಸಿ. ಮೂರು ವರ್ಷಗಳಿಂದ ಜಿಗಜಿಣಗಿ ಬಳಿ ಕೆಲಸ ಬಿಟ್ಟು ಅಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಇದೀಗ ಮಲ್ಲಿಕಾರ್ಜುನನನ್ನು ಬರ್ಬರವಾಗಿ ಕೊಲೆಗೈಯ್ಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಣಕಾಸು ವ್ಯವಹಾರವೇ ಮಲ್ಲಿಕಾರ್ಜುನ ಹತ್ಯೆಗೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಎಸ್ ಪಿ ಶಂಕರ ಮಾರಿಹಾಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular