ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ತಾಲಿಬಾನ್ ಸರ್ಕಾರ ರಚನೆಯಾಗುತ್ತೆ; ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನವರಂಗಿ ಆಟ ಆಡ್ತಿದ್ದಾರೆ; ಪ್ರತಾಪ್ ಸಿಂಹ ಹಿಗ್ಗಾ ಮುಗ್ಗಾ ವಾಗ್ದಾಳಿ

ಮೈಸೂರು: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವುದಾಗಿ ಹೇಳಿರುವ ವಿಚಾರವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿರುವ ಸಂಸದ ಪ್ರತಾಪ್ ಸಿಂಹ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನವರಂಗಿ ಆಟ ಆಡ್ತಿದ್ದಾರೆ. ಜನರಿಗೆ ಎಲ್ಲವೂ ಅರ್ಥವಾಗುತ್ತೆ ಎಂದು ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಒಸಾಮಾಬಿನ್ ಲಾಡೆನ್, ಮುಲ್ಲಾ ಉಮರ್ ನೇತೃತ್ವದಲ್ಲಿ ತಾಲಿಬಾನ್ ಸರ್ಕಾರ ರಚನೆ ಆಗುತ್ತದೆ. ಮುಂದೆ ರಾಜ್ಯದಲ್ಲಿ ಘಜ್ನಿ ಮಹಮ್ಮದ್, ಟಿಪ್ಪು ಸುಲ್ತಾನ್ ಅನ್ನು ವೈಭವೀಕರಿಸುವ ಪಠ್ಯ ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಜರಂಗದಳ ಬ್ಯಾನ್ ಮಾಡುವುದಾಗಿ ಕಾಂಗ್ರೆಸ್ ಹೇಳಿಕೆ ಸಹಿಸಲು ಸಾಧ್ಯವಿಲ್ಲ. ಬಜರಂಗಿ ರಾಮನಿಗಾಗಿ ಸೀತೆಯನ್ನು ಹುಡುಕಿಕೊಂಡು ಹೋದ, ಲಕ್ಷ್ಮಣನಿಗಾಗಿ ಪರ್ವತವನ್ನೇ ಎತ್ತಿಕೊಂಡು ಬಂದ. ಕರ್ನಾಟಕದ ಬಜರಂಗಿಗಳು, ಹಿಂದೂತ್ವಕ್ಕಾಗಿ, ಗೋ ಮಾತೆಗಾಗಿ ಅದೇ ಪರ್ವತದಡಿ ಕಾಂಗ್ರೆಸ್ ನ್ನು ಹೊಸಕಿ ಹಾಕ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read