HomeKarnatakaಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್ ಕಮಿಟಿ ರಚನೆ; ಪದನಿಮಿತ್ತ ಸದಸ್ಯರಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೇಮಕ

ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್ ಕಮಿಟಿ ರಚನೆ; ಪದನಿಮಿತ್ತ ಸದಸ್ಯರಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೇಮಕ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್, ಅಭ್ಯರ್ಥಿಗಳ ಅಯ್ಕೆಗಾಗಿ ಸ್ಕ್ರೀನಿಂಗ್ ಕಮಿಟಿ ರಚನೆ ಮಾಡಿದೆ.

ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ ನೀಡಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೋಹನ್ ಪ್ರಕಾಶ್ ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷರಾಗಿದ್ದರೆ, ಸಂಸದ ನೀರಜ್ ದಾಂಗಿ, ಮೊಹಮ್ಮದ್ ಜಾವೇದ್, ಸಪ್ತಗಿರಿ ಉಲಕ ಅವರು ಸ್ಕ್ರೀನಿಂಗ್ ಕಮಿಟಿ ಸದಸ್ಯರು.

ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ಬಿ.ಕೆ.ಹರಿಪ್ರಸಾದ್, ಎಂ.ಬಿ.ಪಾಟೀಲ್, ರಂದೀಪ್ ಸುರ್ಜೇವಾಲ ಪದನಿಮಿತ್ಯ ಸದಸ್ಯರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular