ದಾವಣಗೆರೆ: ಹಿರಿಯ ನಾಯಕ ಡಾ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಇನ್ನೂ ಘೋಷಣೆಯಾಗಿಲ್ಲ.
ಟಿಕೆಟ್ ಆಕಾಂಕ್ಷಿಯಾಗಿರುವ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಪುತ್ರ ಸಮರ್ಥ್ ಶಾಮನೂರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಟಿಕೆಟ್ ಘೋಷಣೆಗೂ ಮುನ್ನವೇ ಸಮರ್ಥ್ ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಮಧ್ಯಾಹ್ನ ಅವರು ಆಪ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನು ಸಮರ್ಥ್ ಶಾಮನೂರು ನಿಟುವಳ್ಳಿಯ ದುರ್ಗಾಂಬಿಕಾ ದೇವಾಲಯದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಚುನಾವಣಾಧಿಕಾರಿ ಕಚೇರಿಗೆ ತೆರಳಿ ಏ. 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

