ಕಾಂಗ್ರೆಸ್ ಬಸ್ ಯಾತ್ರೆ ಪಂಕ್ಚರ್ ಆಗುವುದರಲ್ಲಿ ಅನುಮಾನವಿಲ್ಲ; ಮಾಜಿ ಸಿಎಂ ಯಡಿಯೂರಪ್ಪ ವ್ಯಂಗ್ಯ

ಕಾಂಗ್ರೆಸ್ ನಡೆಸುತ್ತಿರುವ ಬಸ್ ಯಾತ್ರೆಗೆ ವ್ಯಂಗ್ಯವಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇದು ಪಂಕ್ಚರ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಅಸಮಾಧಾನ ತುಂಬಿ ತುಳುಕುತ್ತಿದೆ. ಜಿ. ಪರಮೇಶ್ವರ್ ಇದನ್ನು ಈಗಾಗಲೇ ವ್ಯಕ್ತಪಡಿಸಿದ್ದಾರೆ ಎಂದರು.

ಬಿಜೆಪಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯುವುದು ಖಚಿತ. 120 ರಿಂದ 130 ಸೀಟುಗಳನ್ನು ನಾವು ಗೆಲ್ಲುತ್ತೇವೆ ಎಂದು ಹೇಳಿದ ಯಡಿಯೂರಪ್ಪ, ಮುಂದಿನ ಬಜೆಟ್ ಸಂದರ್ಭದಲ್ಲಿ ಹಲವು ಜನಪ್ರಿಯ ಯೋಜನೆಗಳನ್ನು ಘೋಷಿಸುತ್ತೇವೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read