ಕಾಂಗ್ರೆಸ್ ಭ್ರಷ್ಟಾಚಾರದ ಅವಿಭಾಜ್ಯ ಅಂಗ; ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ಗಳು ವಿಸಿಟಿಂಗ್ ಕಾರ್ಡ್ ಇದ್ದಂತೆ. ಆ ಕಾರ್ಡ್ ನಿಂದ ಯಾವುದೇ ಪ್ರಯೋಜನವಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಯಲಹಂಕ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಆರ್. ವಿಶ್ವನಾಥ್ ಪರ ಚುನಾವಣೆ ಪ್ರಚಾರ ನಡೆಸಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ಭ್ರಷ್ಟಾಚಾರದ ಅವಿಭಾಜ್ಯ ಅಂಗ. ಜಾತಿ, ಧರ್ಮಗಳ ನಡುವೆ ಒಡಕುಂಟು ಮಾಡಲು ಕಾಂಗ್ರೆಸ್ ಯತ್ನಿಸುತ್ತಿದೆ. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ನ್ನು ಉಪ್ಪಿನಕಾಯಿ ಹಾಕಬೇಕಷ್ಟೇ. ಅದರಿಂದ ಯಾವುದೇ ಉಪಯೋಗವೂ ಇಲ್ಲ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನೇ ರಾಜ್ಯದಿಂದ ಕಿತ್ತೊಗೆಯಿರಿ ಎಂದು ಹೇಳಿದರು.

ಎಸ್.ಆರ್. ವಿಶ್ವನಾಥ್ ಬಿಡಿಎ ಅಧ್ಯಕ್ಷರಾಗಿ ಹೊಸ ಲೇಔಟ್ ನಿರ್ಮಾಣ ಮಾಡಿದ್ದಾರೆ. ಎಲ್ಲಾ ವರ್ಗದ ಜನರನ್ನು ಸಮಾನವಾಗಿ ನೋಡಿಕೊಂಡಿದ್ದಾರೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read