HomeKarnatakaಕಾಂಗ್ರೆಸ್ ಮುಳುಗುತ್ತಿರುವ ಹಡಗಲ್ಲ, ಈಗಾಗಲೇ ಮುಳುಗಿದೆ: ಜಗದೀಶ್ ಶೆಟ್ಟರ್ ವ್ಯಂಗ್ಯ

ಕಾಂಗ್ರೆಸ್ ಮುಳುಗುತ್ತಿರುವ ಹಡಗಲ್ಲ, ಈಗಾಗಲೇ ಮುಳುಗಿದೆ: ಜಗದೀಶ್ ಶೆಟ್ಟರ್ ವ್ಯಂಗ್ಯ

ಕಾಂಗ್ರೆಸ್ ಮುಳುಗುತ್ತಿರುವ ಹಡಗಲ್ಲ, ಅದು ಈಗಾಗಲೇ ಮುಳುಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.

ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಕ್ಷ ಬಿಟ್ಟು ಹೋದ ಶಾಸಕರನ್ನು ಯಾವುದೇ ಕಾರಣಕ್ಕೂ ಸೇರಿಸಿಕೊಳ್ಳುವುದಿಲ್ಲ ಎಂದಿದ್ದರು. ಈಗ ವಾಪಸ್ ಬರುವಂತೆ ಅವರುಗಳಿಗೆ ಮತ್ತೆ ಕರೆ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ದೇಶದ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಬಹುತೇಕ ನಿರ್ನಾಮಗೊಂಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿ ಬಹುಮತದೊಂದಿಗೆ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಅವರು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular