
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವ ಲಕ್ಷ್ಮಣ ಸವದಿ ಇಂದು ಅವರುಗಳನ್ನು ಭೇಟಿಯಾಗಿ ಅಂತಿಮ ಹಂತದ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಅಥಣಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಲಕ್ಷ್ಮಣ ಸವದಿ ಅವರಿಗೆ ನೀಡಲು ತೀರ್ಮಾನಿಸಲಾಗಿದೆ ಎನ್ನಲಾಗಿದ್ದು, ಈ ಮೂಲಕ ರಮೇಶ್ ಜಾರಕಿಹೊಳಿ ಅವರಿಗೆ ಪರೋಕ್ಷವಾಗಿ ತಿರುಗೇಟು ನೀಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಬಹುತೇಕ ಇಂದು ಸಂಜೆಯೊಳಗೆ ಲಕ್ಷ್ಮಣ ಸವದಿ ತಮ್ಮ ನಿಲುವು ಪ್ರಕಟಿಸಲಿದ್ದಾರೆ ಎಂದು ಅವರ ಆಪ್ತರು ಹೇಳಿದ್ದಾರೆ.

