
ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ಗಿರಿಧರ (46) ಹಾಗೂ ಮೂರು ವರ್ಷದ ಮಗು ಮಯಂಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹೊನ್ನಾವರದ ಸಂಬಂಧಿಕರ ಮನೆಗೆ ಮದುವೆಗೆಂದು ಗಿರಿಧರ ಕುಟುಂಬ ಕಾರಿನಲ್ಲಿ ತೆರಳುತ್ತಿತ್ತು. ಈ ವೇಳೆ ಕೇರಳದಿಂದ ಚಿಕ್ಕಮಗಳೂರು ಕಡೆ ಪ್ರವಾಸಕ್ಕೆ ತೆರಳುತ್ತಿದ್ದ ಟಿಟಿ ವಾಹನಕ್ಕೆ ಕಾರು ಡಿಕ್ಕಿಯಾಗಿದೆ. ಟಿಟಿ ವಾಹನದಲ್ಲಿದ್ದ 7 ಜನರಿಗೆ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

