HomeKarnatakaಕಾರು - ಲಾರಿ ಡಿಕ್ಕಿ; ನವದಂಪತಿ ಸ್ಥಳದಲ್ಲೇ ದುರ್ಮರಣ

ಕಾರು – ಲಾರಿ ಡಿಕ್ಕಿ; ನವದಂಪತಿ ಸ್ಥಳದಲ್ಲೇ ದುರ್ಮರಣ

ತುಮಕೂರು: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ನಡೆದಿದೆ.

ರಘು (35) ಅನುಷಾ (28) ಮೃತ ದಂಪತಿಗಳು. ಹಾಸನ ಜಿಲ್ಲೆಯ ಅರಸಿಕೆರೆ ಮೂಲದ ರಘು ಹಾಗೂ ಚಿಕ್ಕನಾಯಕನಹಳ್ಳಿ ಮೂಲದ ಅನುಷಾ ಕಳೆದ ಒಂದುವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಇಬ್ಬರೂ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಬಂಧಿಕರ ಮದುವೆಗೆಂದು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular