ಕಾರ್ಮಿಕರ ಹೆಸರಿನಲ್ಲಿ ನೋಂದಣಿ ಮಾಡಿಸಿಕೊಂಡಿದ್ದ ಅನರ್ಹರಿಗೆ ‘ಬಿಗ್ ಶಾಕ್’

ಕಾರ್ಮಿಕ ಸಚಿವ ಸಂತೋಷ್ ಲಾಡ್, ಗುರುವಾರದಂದು ಬಿಜೆಪಿ ಸದಸ್ಯ ಡಿ.ಎಸ್. ಅರುಣ್ ಅವರ ಪ್ರಶ್ನೆಗೆ ಈ ಉತ್ತರ ನೀಡಿದ್ದು, ಒಟ್ಟು 44.28 ಲಕ್ಷ ಕಾರ್ಮಿಕರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಆದರೆ ಪರಿಶೀಲದ ವೇಳೆ ಅನರ್ಹರೆಂದು ಕಂಡುಬಂದ ಕಾರಣಕ್ಕೆ 24,000 ನಕಲಿ ಕಾರ್ಮಿಕರ ನೋಂದಣಿ ರದ್ದು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕಾರ್ಮಿಕರಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಈ ಹಿಂದೆ ನೋಂದಣಿ ಕಾರ್ಯ ಆರಂಭಿಸಲಾಗಿದ್ದು, ಆದರೆ ಇದರ ಪ್ರಯೋಜನ ಪಡೆಯಲು ಅನರ್ಹರು ಸಹ ನೋಂದಣಿ ಮಾಡಿಕೊಂಡಿದ್ದರು.

ಇದೀಗ ಅಂತವರಿಗೆ ಬಿಗ್ ಶಾಕ್ ನೀಡಲಾಗಿದ್ದು, ಈವರೆಗೆ ಕಾರ್ಮಿಕರ ಹೆಸರಿನಲ್ಲಿ ನೋಂದಣಿ ಮಾಡಿಸಿಕೊಂಡು ಸರ್ಕಾರದ ಸೌಲಭ್ಯ ಪಡೆಯುತ್ತಿದ್ದ 24,000 ನಕಲಿ ಕಾರ್ಮಿಕರ ನೋಂದಣಿಯನ್ನು ರದ್ದು ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read