
ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರರಾದ ಬಿ.ವೈ. ರಾಘವೇಂದ್ರ ಹಾಗೂ ಬಿ.ವೈ. ವಿಜಯೇಂದ್ರ ಗುರುವಾರದಂದು ಶಿಕಾರಿಪುರದ ಬಿಜೆಪಿ ಕಚೇರಿಗೆ ತೆರಳಿ ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದ್ದಾರೆ. ಕ್ಷೇತ್ರದಲ್ಲಿ ವಿಜಯೇಂದ್ರ ಅಭ್ಯರ್ಥಿಯಾಗಿದ್ದು, ಬೂತ್ ಕಾರ್ಯಕರ್ತರಿಂದ ಮತದಾನದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಈ ವಿಧಾನಸಭಾ ಚುನಾವಣೆಯಲ್ಲಿ ತಾವು ಗೆಲ್ಲುವುದು ಖಚಿತ ಎಂಬ ವಿಶ್ವಾಸದಲ್ಲಿರುವ ಬಿ.ವೈ. ವಿಜಯೇಂದ್ರ, ಎಷ್ಟು ಮತಗಳ ಮುನ್ನಡೆ ಸಿಗಬಹುದು ಎಂಬ ಲೆಕ್ಕಾಚಾರ ಹಾಕುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಹೋದರರಿಬ್ಬರು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ಯಾವ ಬೂತ್ ಗಳಲ್ಲಿ ಎಷ್ಟೆಷ್ಟು ಮತದಾನವಾಗಿದೆ ಎಂಬುದರ ವಿವರ ತಿಳಿದುಕೊಂಡಿದ್ದಾರೆ.

