HomeKarnatakaಕಾಲೇಜು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಗಳಿಗೆ ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಗಳು ಹೆಚ್ಚುತ್ತಲೇ ಇದೆ. ಇದೀಗ ಕಾಲೇಜು ವಿದ್ಯಾರ್ಥಿಯೊಬ್ಬ ನೇಣುಗೆ ಶರಣಾಗಿರುವ ಘಟನೆ ಬೆಂಗಳೂರಿನ ಬೈಯ್ಯಪ್ಪನಹಳ್ಳಿಯಲ್ಲಿ ನಡೆದಿದೆ.

18 ವರ್ಷದ ಚಾರ್ಲ್ಸ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಬೈಯ್ಯಪ್ಪನಹಳ್ಳಿಯ ಕೃಷ್ಣಯ್ಯನಪಾಳ್ಯದ ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಥಮ ಪಿಯುಸಿಯಲ್ಲಿ ಫೇಲ್ ಆಗಿದ್ದ ಚಾರ್ಲ್ಸ್ ಮರು ಪರೀಕ್ಷೆ ಬರೆದಿದ್ದ. ಮರು ಪರಿಕ್ಷೆಯಲ್ಲಿಯೂ ಫೇಲ್ ಆಗಿದ್ದ. ಇದರಿಂದ ಕಾಲೇಜಿನವರು ಬೇರೆ ಕಾಲೇಜಿಗೆ ಸೇರುವಂತೆ ಸೂಚಿಸಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular