HomeEntertainment‘ಕಿಚ್ಚ’ನ ಅಭಿಮಾನಿಗಳಿಗೆ ಗುಡ್ ನ್ಯೂಸ್: ಜೂನ್ 10 ರಂದು ಸುದೀಪ್ ಹೊಸ ಸಿನಿಮಾ ಅನೌನ್ಸ್

‘ಕಿಚ್ಚ’ನ ಅಭಿಮಾನಿಗಳಿಗೆ ಗುಡ್ ನ್ಯೂಸ್: ಜೂನ್ 10 ರಂದು ಸುದೀಪ್ ಹೊಸ ಸಿನಿಮಾ ಅನೌನ್ಸ್

ವಿಧಾನಸಭೆ ಚುನಾವಣೆಗೆ ಬಿಜೆಪಿ ಪರ ಭರ್ಜರಿ ಪ್ರಚಾರ ನಡೆಸಿದ್ದ ನಟ ಕಿಚ್ಚ ಸುದೀಪ್ (kiccha sudeep) ಮುಂದಿನ ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ಬಹಳ ಕುತೂಹಲವಿದೆ. ಈ ಕುತೂಹಲಕ್ಕೆ ಜೂನ್ 10 ರಂದು ತೆರೆ ಬೀಳಲಿದೆ.

ಹೌದು, ಜೂನ್ 10 ರಂದು ನಟ ಕಿಚ್ಚ ಸುದೀಪ್ ಹೊಸ ಸಿನಿಮಾ (New movie) ಅನೌನ್ಸ್ ಆಗಲಿದೆ. ವಿಕ್ರಾಂತ್ ರೋಣ ಸಿನಿಮಾದ ಬಳಿಕ ಸುದೀಪ್ ಸಿನಿಮಾದ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ.

ವಿಕ್ರಾಂತ್ ರೋಣ’ ಸಿನಿಮಾ ಬಿಡುಗಡೆ ಬಳಿಕ ಅವರು ಒಂದು ಬ್ರೇಕ್ ತೆಗೆದುಕೊಂಡ ಕಿಚ್ಚ ಸುದೀಪ್ ನಂತರ ಬಿಗ್ ಬಾಸ್ ರಿಯಾಲಿಟಿ ಶೋ (Bigg Boss Bigg Boss reality show reality show) ನಲ್ಲಿ ಬ್ಯುಸಿಯಾಗಿದ್ದರು. ನಂತರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದರು. ಇನ್ನೂ, ಸುದೀಪ್ ಅವರ 46ನೇ ಚಿತ್ರಕ್ಕೆ ಬಾಲಿವುಡ್ (Bollywood) ನಟಿ ಸಿಮ್ರಾತ್ ಕೌರ್ (Simrat Kaur) ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular