ಕಿಡ್ನಿ ಸ್ಟೋನ್‌ ಸಮಸ್ಯೆಗೆ ಈ ಜ್ಯೂಸ್‌ಗಳಲ್ಲಿದೆ ಪರಿಹಾರ…!

ಮೂತ್ರಪಿಂಡದ ಸಮಸ್ಯೆ ಹೊಂದಿರುವವರು ವಿಪರೀತ ನೋವು ಅನುಭವಿಸುತ್ತಾರೆ. ಮೂತ್ರಪಿಂಡದಲ್ಲಿ ಕಲ್ಲು ಬೆಳೆದಿದ್ದರೆ ಅದರಿಂದ ಕೂಡ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ಮೂತ್ರಪಿಂಡದಲ್ಲಿ ಕಲ್ಲು ಬೆಳೆದಿದ್ದರೆ ಆಹಾರ ಕ್ರಮವನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಬೇಕಾಗುತ್ತದೆ. ಕಿಡ್ನಿ ಸಮಸ್ಯೆ ಇರುವವರಿಗೆ ಕೆಲವೊಂದು ಜ್ಯೂಸ್‌ ಸೇವನೆಯಿಂದ ಸಾಕಷ್ಟು ಅನುಕೂಲವಾಗುತ್ತದೆ. ಕಿಡ್ನಿ ಕಲ್ಲುಗಳಿಂದಲೂ ಇವು ಪರಿಹಾರ ನೀಡಬಲ್ಲವು. ನಿಮ್ಮ ಆಹಾರದಲ್ಲಿ ಈ 3 ವಿಧದ ಜ್ಯೂಸ್ ಅನ್ನು ಸೇರ್ಪಡೆ ಮಾಡಿಕೊಳ್ಳಿ.

ಟೊಮೆಟೊ ಜ್ಯೂಸ್‌: ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಲು ಟೊಮೆಟೊ ರಸವು ತುಂಬಾ ಉಪಯುಕ್ತವಾಗಿದೆ. ಎರಡು ಟೊಮೆಟೊಗಳನ್ನು ಚೆನ್ನಾಗಿ ತೊಳೆಯಿರಿ ಮತ್ತು ಅವುಗಳನ್ನು ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ. ಈ ಜ್ಯೂಸ್‌ಗೆ ಉಪ್ಪು ಮತ್ತು ಕಾಳುಮೆಣಸಿನ ಪುಡಿಯನ್ನು ಬೆರೆಸಿ ಸೇವಿಸಿ. ತಯಾರಿಸಿದ ಮಿಶ್ರಣವನ್ನು ಫ್ರಿಡ್ಜ್ ನಲ್ಲಿಟ್ಟು ನಂತರ ಕೂಡ ಸೇವಿಸಬಹುದು.

ನಿಂಬೆ ಜ್ಯೂಸ್‌: ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದೆ. ಮೂತ್ರಪಿಂಡದ ಕಲ್ಲಿನ ಸಮಸ್ಯೆಯನ್ನು ನಿಂಬೆ ರಸ ನಿವಾರಿಸಬಲ್ಲದು. ಒಂದು ಬಟ್ಟಲಿನಲ್ಲಿ ಮೊಸರನ್ನು ತೆಗೆದುಕೊಂಡು ಅದಕ್ಕೆ ಒಂದು ಚಮಚ ನಿಂಬೆ ರಸವನ್ನು ಸೇರಿಸಿ. ರುಚಿಗೆ ತಕ್ಕಂತೆ ಉಪ್ಪನ್ನು ಬೆರೆಸಿ. ಈ ಮಿಶ್ರಣವನ್ನು ಸೇವಿಸಿ. ಹೀಗೆ ಮಾಡುವುದರಿಂದ ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ತುಳಸಿ ರಸ: ತುಳಸಿಯಿಂದ ತಯಾರಿಸಿದ ಜ್ಯೂಸ್ ಕಿಡ್ನಿ ಸ್ಟೋನ್ ಸಮಸ್ಯೆಯನ್ನು ಹೋಗಲಾಡಿಸಲು ಉಪಯುಕ್ತವಾಗಿದೆ. ಸ್ವಲ್ಪ ತುಳಸಿ ಎಲೆಗಳ ರಸವನ್ನು ತೆಗೆಯಿರಿ. ಅದಕ್ಕೆ ಒಂದು ಚಮಚ ಜೇನುತುಪ್ಪವನ್ನು ಬೆರೆಸಿ. ಇದೇ ರೀತಿಯ ಮಿಶ್ರಣವನ್ನು ತಯಾರಿಸಿಕೊಂಡು ಬೆಳಗ್ಗೆ ಮತ್ತು ಸಂಜೆ ಸೇವಿಸಿ. ಹೀಗೆ ಮಾಡುವುದರಿಂದ ಕಿಡ್ನಿ ಕಲ್ಲು ನಿವಾರಣೆಯಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read