HomeKarnatakaಕುಸಿದು ಬಿದ್ದ ಸರ್ಕಾರಿ ಶಾಲೆಯ ಗೋಡೆ; ಮಕ್ಕಳು ಜಸ್ಟ್ ಮಿಸ್; ರಜೆ ನೀಡಿದ್ದಕ್ಕೆ ತಪ್ಪಿದ ಭಾರಿ...

ಕುಸಿದು ಬಿದ್ದ ಸರ್ಕಾರಿ ಶಾಲೆಯ ಗೋಡೆ; ಮಕ್ಕಳು ಜಸ್ಟ್ ಮಿಸ್; ರಜೆ ನೀಡಿದ್ದಕ್ಕೆ ತಪ್ಪಿದ ಭಾರಿ ಅನಾಹುತ…!

ಕಾರವಾರ: ವರುಣಾರ್ಭಟಕ್ಕೆ ಸರ್ಕಾರಿ ಶಾಲೆಯ ಗೋಡೆ ಕುಸಿದು ಬಿದ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗುತ್ತಿವೆ. ಜೋಯಿಡಾ ತಾಲೂಕಿನ ಚಾಪೋಲಿ ಗ್ರಾಮದಲ್ಲಿ ಮಳೆಯ ಅಬ್ಬರಕ್ಕೆ ಶಿಥಿಲಗೊಂಡಿದ್ದ ಸರ್ಕಾರಿ ಶಾಲೆಯ ಗೋಡೆ ಕುಸಿದು ಬಿದ್ದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಇಂದು ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ. ಶಾಲೆಗೆ ರಜೆ ನೀಡಿದ್ದರಿಂದ ಭಾರಿ ಅನಾಹುತ ತಪ್ಪಿದ್ದು, ಮಕ್ಕಳು ಶಿಕ್ಷಕರು ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊಯಿಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular