ಕೃಷಿಕರಿಗೆ ಭರ್ಜರಿ ಗುಡ್‌ ನ್ಯೂಸ್:‌ ʼರೈತ ಶಕ್ತಿʼ ಯೋಜನೆಯಡಿ ಡಿಸೇಲ್‌ ಮೇಲೆ ಪ್ರತಿ ತಿಂಗಳು ಸಿಗಲಿದೆ ಸಬ್ಸಿಡಿ

ಬೆಂಗಳೂರು: ರೈತಾಪಿ ಕೃಷಿಕರಿಗೆ ಅನುಕೂಲ ಆಗಲಿ ಅನ್ನೋ ನಿಟ್ಟಿನಲ್ಲಿ ಅವರ ಮೇಲಿನ ಹೊರೆ ಕಡಿಮೆ ಮಾಡಲು ʼರೈತ ಶಕ್ತಿʼ ಯೋಜನೆ ಈ ತಿಂಗಳಾಂತ್ಯಕ್ಕೆ ಸಿಎಂ ಚಾಲನೆ‌ ನೀಡಲಿದ್ದಾರೆ.

ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ನಿಟ್ಟಿನಲ್ಲಿ ಹಾಗೂ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನದ ವೆಚ್ಚದ ಹೊರೆಯನ್ನು ಕಡಿಮೆ ಮಾಡಲು ಈ ಯೋಜನೆ ಜಾರಿಗೆ ತರಲಾಗುತ್ತಿದೆ. ಇನ್ನು ಕರ್ನಾಟಕ ರಾಜ್ಯದಲ್ಲಿಯೇ ಮೊದಲ ಬಾರಿಗೆ ಇದು ಜಾರಿಯಾಗುತ್ತಿದೆ.

2022-23 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ʼರೈತ ಶಕ್ತಿʼ ಯೋಜನೆ ಜಾರಿ ಆಗ್ತಾ ಇದೆ. ಪ್ರತಿ ಎಕರೆಗೆ ರೂ 250 ಗಳಂತೆ ಗರಿಷ್ಠ ಐದು ಎಕರೆಗೆ ಡಿ.ಬಿ.ಟಿ. ಮೂಲಕ ಡೀಸೆಲ್ ಗೆ ಸಹಾಯ ಧನವನ್ನು ನೀಡುವ ಉದ್ದೇಶ ಈ ಯೋಜನೆಯದ್ದು. ಈ ಯೋಜನೆಯಿಂದ ಸುಮಾರು 45 ಲಕ್ಷಕ್ಕೂ ಹೆಚ್ಚಿನ ರೈತಾಪಿ ಕುಟುಂಬಗಳಿಗೆ ಅನುಕೂಲ ಆಗಲಿದೆ. ಅವರಿಗೆ ಡಿಬಿಟಿ ಮೂಲಕ ಸಬ್ಸಿಡಿಯನ್ನು ನೇರವಾಗಿ ರೈತರ ಖಾತೆಗೆ ಬಿಡುಗಡೆ ಆಗಲಿದೆ.

FRUITS ತಂತ್ರಾಂಶದಲ್ಲಿ ಯಾವೆಲ್ಲಾ ರೈತರು ನೋಂದಾವಣಿ ಮಾಡಿಕೊಂಡಿದ್ದಾರೋ ಆ ರೈತರು ಹೊಂದಿರುವ ಭೂ ಹಿಡುವಳಿಯ ಆಧಾರದ ಮೇಲೆ ಪ್ರತಿಯೊಬ್ಬ ರೈತರಿಗೆ ಪ್ರತಿ ಎಕರೆಗೆ ರೂ. 250 ರಂತೆ ಗರಿಷ್ಠ ಐದು ಎಕರೆಗೆ 1250 ರೂಪಾಯಿಯವರಗೆ ಡೀಸೆಲ್ ಸಹಾಯಧನವನ್ನು ಒದಗಿಸಲಾಗುತ್ತಿದೆ. ಅರ್ಹ ರೈತರಿಗೆ ಡೀಸಲ್ ಸಹಾಯಧನದ ಮೊತ್ತವನ್ನು ಸರ್ಕಾರದ DBT ವೋರ್ಟಲ್ ಮೂಲಕ ಆಧಾರದ ಸೀಡೆಡ್ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಖಾತೆಗೆ ವರ್ಷಕ್ಕೊಮ್ಮೆ ವರ್ಗಾಯಿಸಲಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read