HomeAutoಕೆಲಸದಿಂದ ಕಿತ್ತು ಹಾಕಿದ್ದಕ್ಕೆ ವಿಚಿತ್ರ ರೀತಿಯಲ್ಲಿ ಸೇಡು ತೀರಿಸಿಕೊಂಡ ಕಾರ್‌ ಕ್ಲೀನರ್‌; ಸಿಸಿ ಟಿವಿಯಲ್ಲಿ ಸೆರೆಯಾಗಿದೆ...

ಕೆಲಸದಿಂದ ಕಿತ್ತು ಹಾಕಿದ್ದಕ್ಕೆ ವಿಚಿತ್ರ ರೀತಿಯಲ್ಲಿ ಸೇಡು ತೀರಿಸಿಕೊಂಡ ಕಾರ್‌ ಕ್ಲೀನರ್‌; ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಕೃತ್ಯ….!

ನೊಯ್ಡಾದಲ್ಲಿ ಕಾರು ವಾಶ್‌ ಮಾಡುವ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಉದ್ಯೋಗದಿಂದ ವಜಾ ಮಾಡಿದ್ದಕ್ಕೆ ವಿಚಿತ್ರ ರೀತಿಯಲ್ಲಿ ಸೇಡು ತೀರಿಸಿಕೊಂಡಿದ್ದಾನೆ. ನೋಯ್ಡಾದ ಸೆಕ್ಟರ್ 113 ಪೊಲೀಸ್ ಠಾಣಾ ವ್ಯಾಪ್ತಿಯ ಸೊಸೈಟಿಯೊಂದರಲ್ಲಿ ಈ ಯುವಕ 15 ಕಾರುಗಳನ್ನು ಆಸಿಡ್‌ನಿಂದ ತೊಳೆದಿದ್ದಾನೆ.

ಇದರಿಂದ ಕಾರುಗಳು ಸಂಪೂರ್ಣ ಹಾನಿಗೊಳಗಾಗಿವೆ. ಕಾರಿನ ಪೇಂಟ್‌ ಮತ್ತು ಗಾಜುಗಳಿಗೆ ಹಾನಿಯಾಗಿದೆ. ನೋಯ್ಡಾ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕಾರು ಡ್ಯಾಮೇಜ್‌ ಆಗಿರುವ ಬಗ್ಗೆ ಹಲವರು ಪೊಲೀಸರಿಗೆ ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾರ್ಚ್ 15 ರಂದು ಬೆಳಗ್ಗೆ ಕಚೇರಿಗೆ ತೆರಳುವ ವೇಳೆ ನೆಲಮಾಳಿಗೆಯಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಹೊರತೆಗೆಯಲು ಬಂದಾಗ ಆಸಿಡ್ ಎರಚಿರುವುದು ಬೆಳಕಿಗೆ ಬಂದಿದೆ. ಕ್ಲೀನರ್‌ ಮಾಡಿರುವ ಈ ಸೇಡಿನ ಕೆಲಸದಿಂದ 15 ಕಾರುಗಳು ಹಾಳಾಗಿವೆ.

ಸಂತ್ರಸ್ತರ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಯುವಕ ಇದೇ ಸೊಸೈಟಿಯಲ್ಲಿ ಕಾರು ತೊಳೆಯುವ ಕೆಲಸ ಮಾಡುತ್ತಿದ್ದ. ಸಿಸಿ ಟಿವಿ ಕ್ಯಾಮೆರಾವನ್ನು ಪರಿಶೀಲಿಸಿದಾಗ ರಾಮ್ ರಾಜ್ ಎಂಬ ವ್ಯಕ್ತಿ ಈ ಕೃತ್ಯ ಎಸಗಿರುವುದು ಕಂಡುಬಂದಿದೆ. ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.  ಮೂಲತಃ ಹರ್ದೋಯಿ ನಿವಾಸಿಯಾಗಿರುವ ರಾಮರಾಜ್‌ನನ್ನು ಕೆಲ ದಿನಗಳ ಹಿಂದಷ್ಟೆ ಕೆಲಸದಿಂದ ತೆಗೆದು ಹಾಕಲಾಗಿತ್ತು.

For Latest News Updates, Join Our Whatsapp Community🚩
RELATED ARTICLES

Most Popular