ಕೇಳಿದ ತಕ್ಷಣ ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಾಲಕಿ

ಇತ್ತೀಚಿನ ದಿನಗಳಲ್ಲಿ ಚಿಕ್ಕಪುಟ್ಟ ವಿಷಯಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ವರದಿಯಾಗುತ್ತಿದ್ದು, ಆಘಾತ ತರಿಸುತ್ತಿವೆ. ಇದೀಗ ಇಂತಹದೇ ಮತ್ತೊಂದು ಘಟನೆ ನಡೆದಿದೆ.

ತಾನು ಕೇಳಿದ ತಕ್ಷಣ ಮೊಬೈಲ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ವಾಲ್ಪಾಡಿ ಗ್ರಾಮದ ನಾಗಂದಡ್ಡದಲ್ಲಿ ಭಾನುವಾರದಂದು ಈ ಘಟನೆ ನಡೆದಿದ್ದು, ಯುತಿ ಎಂಬ 15 ವರ್ಷದ ಬಾಲಕಿ ಸಾವನ್ನಪ್ಪಿದವಳಾಗಿದ್ದಾಳೆ.

ಈಕೆಯ ತಾಯಿ ಮತ್ತು ತಂಗಿ ಶಿರ್ತಾಡಿಗೆ ಹೊರಟಿದ್ದು, ನೀವು ಹೋಗಿ ಬರುವವರೆಗೂ ನನಗೆ ಮೊಬೈಲ್ ಕೊಡಿ ಎಂದು ಯುತಿ ಕೇಳಿದ್ದಾಳೆ. ಆದರೆ ತಾಯಿ ಅಲ್ಲಿಗೆ ಹೋಗಿ ಬಂದ ಬಳಿಕ ನೀಡುವುದಾಗಿ ಹೇಳಿದ್ದು, ಅವರು ಹೋಗಿ ಬರುವುದರೊಳಗಾಗಿ ಆತುರದ ನಿರ್ಧಾರ ಕೈಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read