HomeKarnatakaಕೇಸರಿ ಶಾಲಿನೊಂದಿಗೆ ಬಿಜೆಪಿ ಕಚೇರಿಯಲ್ಲಿ ಕಾಣಿಸಿಕೊಂಡ ರೋಷನ್ ಬೇಗ್; ಪುತ್ರನಿಗೆ ಟಿಕೆಟ್ ಕೊಡಿಸಲು ಲಾಬಿ

ಕೇಸರಿ ಶಾಲಿನೊಂದಿಗೆ ಬಿಜೆಪಿ ಕಚೇರಿಯಲ್ಲಿ ಕಾಣಿಸಿಕೊಂಡ ರೋಷನ್ ಬೇಗ್; ಪುತ್ರನಿಗೆ ಟಿಕೆಟ್ ಕೊಡಿಸಲು ಲಾಬಿ

ನವದೆಹಲಿ: ಮಾಜಿ ಸಚಿವ, ಕಾಂಗ್ರೆಸ್ ನಾಯಕ ಬಿಜೆಪಿ ಕಚೇರಿಯಲ್ಲಿ ಕೇಸರಿ ಶಾಲಿನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ನವದೆಹಲಿಯಲ್ಲಿ ಬಿಜೆಪಿ ಕಚೇರಿಯಲ್ಲಿ ನಡೆದ ಸೂಫಿ ಸಂವಾದದಲ್ಲಿ ಪಾಲ್ಗೊಂಡಿದ್ದ ರೋಷನ್ ಬೇಗ್, ಹೆಗಲ ಮೇಲೆ ಕೇಸರಿ ಶಾಲು ಹಾಕಿಕೊಂಡು ಕಾಣಿಸಿಕೊಂಡಿದ್ದಾರೆ.

ಸಭೆ ಬಳಿಕ ರೋಷನ್ ಬೇಗ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಅಲ್ಲದೇ ನಿನ್ನೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಗ ರುಮಾನ್ ಗೆ ಶಿವಾಜಿ ನಗರ ಟಿಕೆಟ್ ನೀಡುವಂತೆ ರೋಷನ್ ಬೇಗ್ ಲಾಬಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ರುಮಾನ್ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

For Latest News Updates, Join Our Whatsapp Community🚩
RELATED ARTICLES

Most Popular