HomeKarnatakaಕೇಸರಿ ಶಾಲು ಹಾಕಿಕೊಂಡು ಸಿಎಂ ಪರ ರೋಡ್ ಶೋಗೆ ಹೊರಟ ಕಿಚ್ಚ ಸುದೀಪ್

ಕೇಸರಿ ಶಾಲು ಹಾಕಿಕೊಂಡು ಸಿಎಂ ಪರ ರೋಡ್ ಶೋಗೆ ಹೊರಟ ಕಿಚ್ಚ ಸುದೀಪ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರು ಸೂಚಿಸುವ ಅಭ್ಯರ್ಥಿಗಳ ಪರ ತಾವು ಪ್ರಚಾರ ಕಾರ್ಯ ನಡೆಸುವುದಾಗಿ ಹೇಳಿದ್ದ ಖ್ಯಾತ ನಟ ಕಿಚ್ಚ ಸುದೀಪ್ ಇಂದು ಶಿಗ್ಗಾಂವಿಯಲ್ಲಿ ನಡೆಯುವ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರಿನಿಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರ ಜೊತೆ ಒಂದೇ ಹೆಲಿಕಾಪ್ಟರ್ ನಲ್ಲಿ ತೆರಳಿದ ಸುದೀಪ್ ಅವರನ್ನು ಕೇಸರಿ ಶಾಲು ಹಾಕಿ ಸ್ವಾಗತಿಸಲಾಗಿದ್ದು, ಈಗ ನಾಮಪತ್ರ ಸಲ್ಲಿಕೆ ವೇಳೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಇರಲಿದ್ದಾರೆ ಎನ್ನಲಾಗಿದೆ.

ಕಿಚ್ಚ ಸುದೀಪ್ ಬರುತ್ತಾರೆ ಎಂಬ ಕಾರಣಕ್ಕೆ ಅವರ ಅಭಿಮಾನಿಗಳು ಕಿಕ್ಕಿರಿದು ನೆರೆದಿದ್ದು, ನೆಚ್ಚಿನ ನಟನಿಗಾಗಿ ಕಾದು ನಿಂತಿದ್ದಾರೆ. ಎರಡು ಕಿಲೋಮೀಟರ್ ವರೆಗೆ ರೋಡ್ ಶೋ ನಡೆಯಲಿದೆ ಎನ್ನಲಾಗಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular