HomeCrimeಕೊಲೆ ಆರೋಪಿಗಳು ತಪ್ಪಿಸಿಕೊಳ್ಳಲು ಸಹಕಾರ; ಪತ್ರಕರ್ತ ಅರೆಸ್ಟ್

ಕೊಲೆ ಆರೋಪಿಗಳು ತಪ್ಪಿಸಿಕೊಳ್ಳಲು ಸಹಕಾರ; ಪತ್ರಕರ್ತ ಅರೆಸ್ಟ್

ಕೊಲೆ ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಸಹಕಾರ ನೀಡಿದ ಆರೋಪದ ಮೇಲೆ ಪತ್ರಕರ್ತ ಮೆಹಬೂಬ್ ಮುನವಳ್ಳಿಯನ್ನು ದಾವಣಗೆರೆ ಜಿಲ್ಲೆ, ನ್ಯಾಮತಿ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಧಾರವಾಡದ ಮೆಹಬೂಬ್ ಮುನವಳ್ಳಿ ಖಾಸಗಿ ಸುದ್ದಿ ವಾಹಿನಿಯ ವರದಿಗಾರನಾಗಿದ್ದು, ಈತ ಹೊನ್ನಾಳಿ ತಾಲೂಕಿನ ಚೀಲೂರು ಬಳಿ ನಡೆದಿದ್ದ ಕೊಲೆ ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಸಹಕಾರ ನೀಡಿದ್ದ ಎನ್ನಲಾಗಿದೆ.

ಚೀಲೂರು ಬಳಿ ಆಂಜನೇಯ ಎಂಬಾತನನ್ನು ಹತ್ಯೆ ಮಾಡಿದ್ದ ಸುನಿಲ್, ವೆಂಕಟೇಶ್, ಅಭಿಲಾಶ್, ಪವನ್ ಮತ್ತಿತರ ಆರೋಪಿಗಳು ಮಧು ಎಂಬಾತನ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇವರುಗಳಿಗೆ ನೆರವಾಗಿದ್ದ ಆರೋಪ ಮೆಹಬೂಬ್ ಮುನವಳ್ಳಿ ಮೇಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular