ಕೊಲ್ಲಾಪುರದಲ್ಲಿ ಗುಂಪು ಘರ್ಷಣೆ ಪ್ರಕರಣ; ಬೆಳಗಾವಿ ಗಡಿಯಲ್ಲಿ ಪೊಲೀಸ್ ಕಟ್ಟೆಚ್ಚರ

ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ ಈ ಹಿನ್ನೆಲೆಯಲ್ಲಿ ಕೊಲ್ಲಾಪುರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ನಡುವೆ ಬೆಳಗಾವಿ ಗಡಿ ಭಗದಲ್ಲೂ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.

ಕೊಲ್ಲಾಪುರದಲ್ಲಿ ಗುಂಪು ಘರ್ಷಣೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬೆಳಗಾವಿಯ ಗಡಿ ಪ್ರದೇಶಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

ನಿಪ್ಪಾಣಿ, ಕೊಗನೊಳ್ಳಿ, ಬೋರಗಾಂವ್, ಅಕ್ಕೋಟ, ಎಕ್ಸಾಂಬಾ, ಬೇಡಕಿಹಾಳ, ಮಣಕಪುರ, ಸಿದ್ನಾಳ,ಮಂಗೂರ, ಚಂದೂರ ಸೇರಿದಂತೆ ಹಲವು ಗ್ರಾಮಗಳಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ವದಂತಿಗಳಿಗೆ ಯಾರೂ ಕಿವಿಗೊಡದಂತೆ ಮನವಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read