ಕೋಲಾರದಿಂದಲೇ ಸಿದ್ದು ಸ್ಪರ್ಧೆ; ವಾಸ್ತವ್ಯಕ್ಕಾಗಿ ಆಪ್ತರಿಂದ ವಾಸ್ತು ಪ್ರಕಾರದ ಮನೆ ಹುಡುಕಾಟ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ವಿಧಾನಸಭಾ ಚುನಾವಣೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಸ್ವತಃ ಅವರೇ ಈಗಾಗಲೇ ಘೋಷಣೆ ಮಾಡಿದ್ದು, ಒಂದು ಕ್ಷೇತ್ರದಿಂದ ಮಾತ್ರ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಿಂದ ಕಣಕ್ಕಿಳಿದಿದ್ದು, ಚಾಮುಂಡೇಶ್ವರಿಯಲ್ಲಿ ಪರಾಭವಗೊಂಡು ಬಾದಾಮಿಯಲ್ಲಿ ವಿಜಯ ಸಾಧಿಸಿದ್ದರು.

ಆದರೆ ಈ ಬಾರಿ ರಾಜಧಾನಿ ಬೆಂಗಳೂರಿಗೆ ಸಮೀಪದಲ್ಲಿರುವ ಮತ ಕ್ಷೇತ್ರವನ್ನು ಸಿದ್ದರಾಮಯ್ಯ ಆಯ್ದುಕೊಂಡಿದ್ದು, ಇದಕ್ಕೆ ಕೋಲಾರವೇ ಸೂಕ್ತ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಅವರ ಆಪ್ತರು ಅವರಿಗಾಗಿ ಮನೆಯೊಂದರ ಹುಡುಕಾಟ ನಡೆಸಿದ್ದು ವಾಸ್ತುವಿಗೆ ಆದ್ಯತೆ ನೀಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು ಚೆನ್ನೈ – ಹೆದ್ದಾರಿ ಸಮೀಪದಲ್ಲಿರುವ ಮನೆಗಾಗಿ ಹುಡುಕಾಟ ನಡೆಸಿದ್ದು, ಜೊತೆಗೆ ಗಣ್ಯರು ಸಿದ್ದರಾಮಯ್ಯನವರ ಭೇಟಿಗೆ ಬಂದ ಸಂದರ್ಭದಲ್ಲಿ ವಾಹನಗಳ ನಿಲುಗಡೆಗೂ ಸಾಕಷ್ಟು ಸ್ಥಳಾವಕಾಶವಿರುವ ಮನೆಯನ್ನು ಹುಡುಕಲಾಗುತ್ತಿದೆ.

ಮೂಲಗಳ ಪ್ರಕಾರ ಈ ತಿಂಗಳ ಅಂತ್ಯಕ್ಕೆ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಕುಟುಂಬ ಸದಸ್ಯರ ಜೊತೆ ಮನೆಯ ಗೃಹಪ್ರವೇಶ ಹಾಗೂ ಪೂಜೆ ನೆರವೇರಿಸಲಿದ್ದಾರೆ ಎನ್ನಲಾಗುತ್ತಿದ್ದು, ಅಷ್ಟರೊಳಗಾಗಿ ಸೂಕ್ತ ಮನೆಯ ಹುಡುಕಾಟ ನಡೆಯುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read