ಕೋಲಾರದ ʼಕೋಟಿ ಲಿಂಗೇಶ್ವರʼನ ದರ್ಶನವನ್ನೊಮ್ಮೆ ಮಾಡಿ ಬನ್ನಿ

ನೀವು ಕೋಲಾರಕ್ಕೆ ಭೇಟಿ ನೀಡಿದರೆ ಇಲ್ಲಿನ ಕಮ್ಮಸಂದ್ರ ಗ್ರಾಮದಲ್ಲಿನ ಕೋಟಿ ಲಿಂಗೇಶ್ವರ ದೇವಸ್ಥಾನಕ್ಕೆ ಒಮ್ಮೆ ಖಂಡಿತವಾಗಿಯೂ ಭೇಟಿ ನೀಡಿ. ಇದು ತುಂಬಾ ಆಕರ್ಷಣೀಯ ಹಾಗೂ ಪವಿತ್ರ ಕ್ಷೇತ್ರವಾಗಿದೆ.

ಇಲ್ಲಿ 108 ಅಡಿಗಳ ಬೃಹತ್ ಶಿವಲಿಂಗ ಹಾಗೂ ನಂದಿಯ ದೊಡ್ಡದಾದ ವಿಗ್ರಹವನ್ನು ಕಣ್ತುಂಬಿಕೊಳ್ಳಬಹುದು. ಇಲ್ಲಿ ಭಕ್ತರು ಲಿಂಗಗಳನ್ನು ಕೊಂಡುಕೊಂಡು ದೇವಸ್ಥಾನಕ್ಕೆ ಅರ್ಪಿಸುವ ಮೂಲಕ ತಮ್ಮ ಹರಕೆಯನ್ನು ಪೂರ್ಣಗೊಳಿಸುತ್ತಾರೆ.

ಕಮ್ಮಸಂದ್ರದಲ್ಲಿ ಶ್ರೀಸಾಂಬಶಿವಮೂರ್ತಿ ಸ್ವಾಮಿಗಳ ಮಾರ್ಗದರ್ಶನದಲ್ಲಿ ಈ ಬೃಹತ್ ಲಿಂಗವನ್ನು ನಿರ್ಮಿಸಲಾಗಿದೆ. ಈ ದೇವಸ್ಥಾನದ ಮುಖ್ಯದ್ವಾರದಲ್ಲಿ ಶಿವಲಿಂಗ ಪಡೆದು, ಎರಡನೇ ದ್ವಾರಕ್ಕೆ ಬಂದರೆ ಆಕಾಶ ಶಿವಲಿಂಗ ಮತ್ತು ಇತರೆ ದೇವತೆಗಳನ್ನು ಕಣ್ತುಂಬಿಕೊಳ್ಳಬಹುದು. ಈ ದೇವಸ್ಥಾನವು ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read