ಕೋವಿಡ್ ಸಂದರ್ಭದಲ್ಲಿ ಜೀವ ಉಳಿಸಿದ ಬಿಜೆಪಿ ಸರ್ಕಾರಕ್ಕೆ ಮತ್ತೊಂದು ಅವಕಾಶ ನೀಡಿ; ಸಚಿವ ಸುಧಾಕರ್ ಮನವಿ

ರಾಜ್ಯ ವಿಧಾನಸಭಾ ಚುನಾವಣೆಗೆ ಪ್ರಚಾರ ಕಾರ್ಯ ಜೋರಾಗತೊಡಗಿದ್ದು, ಮತ್ತೊಮ್ಮೆ ಅಧಿಕಾರಕ್ಕೇರಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಸಿದ್ಧತೆಗಳು ನಡೆದಿರುವ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.

ಇದರ ನಡುವೆ ಶನಿವಾರದಂದು ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಸಚಿವ ಡಾ. ಕೆ. ಸುಧಾಕರ್, ಅತ್ಯಂತ ಅಪಾಯಕಾರಿಯಾಗಿದ್ದ ಕೋವಿಡ್ ಎರಡನೇ ಅಲೆಯನ್ನು ನಮ್ಮ ಸರ್ಕಾರ ಸಮರ್ಥವಾಗಿ ನಿರ್ವಹಿಸಿದೆ. ಹೀಗಾಗಿ ಜೀವ ಉಳಿಸಿದ ಬಿಜೆಪಿ ಸರ್ಕಾರಕ್ಕೆ ಮತ್ತೊಂದು ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ.

ಈ ಮೊದಲು ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳು ಸೇರಿದಂತೆ ಇತರೆಡೆ ನಾಲ್ಕರಿಂದ ಐದು ಸಾವಿರ ಆಮ್ಲಜನಕ ಸಹಿತ ಬೆಡ್ ಗಳು ಮಾತ್ರ ಲಭ್ಯವಿದ್ದು, ಇದನ್ನು ಒಂದೇ ವರ್ಷದಲ್ಲಿ 30,000 ಕ್ಕೆ ಹೆಚ್ಚಿಸಲಾಗಿದೆ ಎಂದು ಹೇಳಿದ ಅವರು, ವೆಂಟಿಲೇಟರ್ ಪ್ರಮಾಣದಲ್ಲೂ ಕೂಡ ಏರಿಕೆಯಾಗಿದೆ ಎಂದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read