
ಪುಟ್ಟಿರಮ್ಮನ ದೊಡ್ಡಿ ಗ್ರಾಮದ ಕೇತೇಗೌಡ ಎಂಬುವರ ಪುತ್ರ 5 ವರ್ಷದ ಶಿವು ಮೃತಪಟ್ಟ ಬಾಲಕನಾಗಿದ್ದು, ಈತ ತನ್ನ ಮನೆಯ ಹಿತ್ತಲಿನಲ್ಲಿ ಆಟವಾಡುವಾಗ ಇರುವೆಗೆ ಸಿಂಪಡಿಸುವ ಕ್ರಿಮಿನಾಶಕವನ್ನು ಆಕಸ್ಮಿಕವಾಗಿ ಸೇವಿಸಿದ್ದ.
ತೀವ್ರವಾಗಿ ಅಸ್ವಸ್ಥಗೊಂಡ ಬಾಲಕನನ್ನು ಕಾಮಗೆರೆ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವನ್ನಪ್ಪಿದ್ದಾನೆ.

