HomeKarnatakaಕ್ಷೇತ್ರ ಬದಲಾವಣೆ ಇಲ್ಲ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಕ್ಷೇತ್ರ ಬದಲಾವಣೆ ಇಲ್ಲ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕ್ಷೇತ್ರ ಬದಲಾವಣೆ ಮಾಡುವ ವಿಚಾರವಾಗಿ ಎದ್ದಿದ್ದ ಗೊಂದಲಗಳಿಗೆ ತೆರೆ ಎಳೆದಿದ್ದು, ಕ್ಷೇತ್ರ ಬದಲಾವಣೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಬಿಜೆಪಿಯ ಚುನವಣಾ ಮಾಧ್ಯಮ ಕೇಂದ್ರ ಉದ್ಘಾಟಿಸಿದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಶಿಗ್ಗಾವಿ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಕ್ಷೇತ್ರ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾವು ಮಾಡಿದ ಸಾಧನೆಯ ರಿಪೋರ್ಟ್ ಹಿಡಿದು ಮತ ಕೇಳುತ್ತೇವೆ. ಕೋರೊನಾ ಹಾಗೂ ಪ್ರವಾಹದ ಸಂದರ್ಭದಲ್ಲಿಯೂ ಅಭಿವೃದ್ಧಿ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷದ ದುರಾಡಳಿತದ ಬಗ್ಗೆ ಜನರಿಗೆ ತಿಳಿಸುತ್ತೇವೆ. ಕಾಂಗ್ರೆಸ್ ನಾಯಕರು ಧರ್ಮ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಆದರೆ ನಾವು ಧರ್ಮ ಜೋಡಣೆ ಮಾಡುವ ಕೆಲಸ ಮಾಡುತ್ತಿದ್ದೇವೆ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ 50ಕ್ಕೂ ಹೆಚ್ಚು ಹಗರಣಗಳು ನಡೆದಿದ್ದವು. ನಮ್ಮ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ವಿಚಾರಕ್ಕೆ ರಾಜೀಯಿಲ್ಲ. ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕಾಂಗ್ರೆಸ್ ಗೆ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

For Latest News Updates, Join Our Whatsapp Community🚩
RELATED ARTICLES

Most Popular